ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಹತ್ಯೆ ಪ್ರಕರಣದ ಸಿಬಿಐ ತನಿಖೆ ಇಂದು ಸಹ ಮುಂದುವರೆದಿದ್ದು, ಸಿಬಿಐ ಅಧಿಕಾರಿಗಳು ಪ್ರಶಾಂತ ಕೇಕರೆಯನ್ನು ಕರೆಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಇನ್ನು ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಮುತ್ತಗಿ ಸಿಬಿಐ ವಿಚಾರಣೆಗಾಗಿ ಇಂದು ಕೂಡ ಹಾಜರಾಗಿದ್ದಾರೆ. ಮಾಜಿ ಸಚಿವ ವಿನಯ ಕುಲಕರ್ಣಿ ಆಪ್ತ ಸಹಾಯಕ ಪ್ರಶಾಂತ ಕೇಕರೆಯನ್ನು ಕೇಸ್ ಸಂಬಂಧ ಸಿಬಿಐ ವಿಚಾರಣೆಗೊಳಪಡಿಸಿದೆ. ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದೆ.
ವಿನಯ್ ಜಾಮೀನು ಅರ್ಜಿ ಹೈಕೋರ್ಟ್ನಲ್ಲಿ ವಜಾಗೊಂಡ ಬೆನ್ನಲ್ಲೇ ಸರ್ಕಾರಿ ಅಭಿಯೋಜಕಿ ಸೇರಿದಂತೆ ಹಲವರ ವಿಚಾರಣೆಯನ್ನು ಸಿಬಿಐ ಅಧಿಕಾರಿಗಳು ನಡೆಸುತ್ತಿದ್ದು, ಸಿಬಿಐ ತನಿಖಾಧಿಕಾರಿ ರಾಕೇಶ್ ರಂಜನ್ ನೇತೃತ್ವದ ತಂಡ ವಿಚಾರಣೆ ನಡೆಸುತ್ತಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ.
ಇದನ್ನೂ ಓದಿ:ಶಿವಮೊಗ್ಗ: ಕಲ್ಲು ಕ್ವಾರಿಯಲ್ಲಿ ಭೀಕರ ಸ್ಫೋಟ... ಎಂಟು ಸಾವು, ಮೃತರ ಸಂಖ್ಯೆ ಹೆಚ್ಚಾಗುವ ಶಂಕೆ!