ಧಾರವಾಡ: ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕುಗೊಂಡಿದೆ. ಯೋಗೀಶ್ ಗೌಡ ಹತ್ಯೆಯಾದಾಗ ಧಾರವಾಡ ಎಸಿಪಿಯಾಗಿದ್ದ ವಾಸುದೇವ ಅವರನ್ನು ಇಂದು ವಿಚಾರಣೆ ಮಾಡಲಾಗಿದೆ.
ವಿಚಾರಣೆಗೆ ಆಗಮಿಸಿದ ಪೊಲೀಸ್ ಅಧಿಕಾರಿ ವಾಸುದೇವ ಅವರನ್ನು ಸಿಬಿಐ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ. ಯೋಗೀಶ್ ಗೌಡ ಅವರ ಹತ್ಯೆಯಾದಾಗ ವಾಸುದೇವ ಧಾರವಾಡದಲ್ಲಿ ಎಸಿಪಿಯಾಗಿ ಕೆಲಸ ಮಾಡುತ್ತಿದ್ದರು. ಇಂದು ಅವರನ್ನು ಸಿಬಿಐ ಅಧಿಕಾರಿಗಳು ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದ್ದಾರೆ.
ಸಿಬಿಐ ಅಧಿಕಾರಿಗಳಿಂದ ತೀವ್ರ ವಿಚಾರಣೆಗೊಳಪಟ್ಟ ವಾಸುದೇವ, ವಿಚಾರಣೆ ಮುಗಿಸಿಕೊಂಡು ಹೊರ ಬಂದಿದ್ದಾರೆ. ಲಾಕ್ಡೌನ್ ಸಡಿಲಿಕೆಯಾದ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.