ETV Bharat / state

ಮಾಜಿ ಸಚಿವ ವಿನಯ್​ ಕುಲಕರ್ಣಿ‌ ನಾಳೆ ಬೆಳಗ್ಗೆ ಸಿಬಿಐ ವಶಕ್ಕೆ

author img

By

Published : Nov 6, 2020, 9:45 PM IST

ಮಾಜಿ‌ ಸಚಿವ ವಿನಯ್​​ ಕುಲಕರ್ಣಿ ಸಿಬಿಐ ಕಸ್ಟಡಿ ಹಿನ್ನೆಲೆ ಇಂದು ರಾತ್ರಿ ವಶಕ್ಕೆ ಪಡೆದುಕೊಳ್ಳಲು ಕೆಲ ನಿಯಮಗಳು ಅಡ್ಡಿಯಾಗಿರುವ ಕಾರಣ ನಾಳೆ ಬೆಳಗ್ಗೆ ಸಿಬಿಐ ಅಧಿಕಾರಿಗಳು ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ.

ವಿನಯ್​ ಕುಲಕರ್ಣಿ‌
ವಿನಯ್​ ಕುಲಕರ್ಣಿ‌

ಧಾರವಾಡ: ಮಾಜಿ‌ ಸಚಿವ ವಿನಯ್​​ ಕುಲಕರ್ಣಿ ಅವರನ್ನು ರಾತ್ರಿ ವೇಳೆ ಸಿಬಿಐ ಕಸ್ಟಡಿಗೆ ಪಡೆಯಲು ನಿಯಾಮಾನುಸಾರ ಕೆಲವು ನಿಯಮಗಳು ಅಡ್ಡಿಯಾಗಿದ್ದು, ನಾಳೆ ಬೆಳಗ್ಗೆ ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ವಿನಯ್​ ಕುಲಕರ್ಣಿ ಅವರನ್ನು ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ಕೋರ್ಟ್ ಇಂದು ಆದೇಶ ಹೊರಡಿಸಿದೆ.

ಏನಿದು ಪ್ರಕರಣ: ಧಾರವಾಡ ಜಿ.ಪಂ. ಸದಸ್ಯ ಹಾಗೂ ಸ್ಥಳೀಯ ಬಿಜೆಪಿ ನಾಯಕರಾಗಿದ್ದ ಯೋಗೇಶ್ ಗೌಡ ಅವರನ್ನು 2016, ಜೂನ್ 15ರಂದು ಸಪ್ತಾಪುರದಲ್ಲಿ ಹತ್ಯೆ ಮಾಡಲಾಗಿತ್ತು. ಅವರ ಜಿಮ್​ನ ಹೊರಗೆ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಬೈಕ್​ನಲ್ಲಿ ಬಂದಿದ್ದ ಸುಪಾರಿ ಹಂತಕರು ಈ ಕೃತ್ಯ ಎಸಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.