ETV Bharat / state

ಹುಬ್ಬಳ್ಳಿಯ ಅಪಾರ್ಟ್​​ಮೆಂಟ್​​ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಇಬ್ಬರು ಯುವತಿಯರ ರಕ್ಷಣೆ, ಓರ್ವ ಅರೆಸ್ಟ್​

ಹುಬ್ಬಳ್ಳಿಯ ಡಾಲರ್ಸ್ ಕಾಲೋನಿಯ ಅಪಾರ್ಟ್​​ಮೆಂಟ್​ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು. ಈ ಕುರಿತಂತೆ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿ ಇಬ್ಬರು ಯುವತಿಯರನ್ನು ರಕ್ಷಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

author img

By

Published : Mar 5, 2022, 10:25 PM IST

CCB Police raid on Apartment who running Prostitution in Hubli
ವೇಶಾವಾಟಿಕೆ ನಡೆಯುತ್ತಿದ್ದ ಅಪಾರ್ಟ್​​ಮೆಂಟ್​​ ಮೇಲೆ ಸಿಸಿಬಿ ದಾಳಿ

ಹುಬ್ಬಳ್ಳಿ: ಪ್ರತಿಷ್ಠಿತ ಅಪಾರ್ಟ್​​ಮೆಂಟ್​​ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ, ಇಬ್ಬರು ಯುವತಿಯರನ್ನು ಸಿಸಿಬಿ ಪೊಲೀಸರು ರಕ್ಷಿಸಿದ್ದಾರೆ.

ಗೋಕುಲರಸ್ತೆಯ ಪೊಲೀಸ್ ಠಾಣೆ ವ್ಯಾಪ್ತಿಯ ಡಾಲರ್ಸ್ ಕಾಲೋನಿಯಲ್ಲಿರುವ ಅಪಾರ್ಟ್​​ಮೆಂಟ್​ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ದಾಳಿ ವೇಳೆ ವೇಶ್ಯಾವಾಟಿಕೆ ನಡೆಸುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಕೆಲಸ ಕೊಡಿಸುವುದಾಗಿ ಹುಬ್ಬಳ್ಳಿ ಹಾಗೂ ತುಮಕೂರು ಮೂಲದ ಅಮಾಯಕ ಯುವತಿಯರನ್ನು ನಗರಕ್ಕೆ ಕರೆತಂದು ಹೆಚ್ಚು ಹಣದ ಆಮಿಷವೊಡ್ಡಿ ವೇಶ್ಯಾವಾಟಿಕೆ ದಂಧೆಯಲ್ಲಿ ದೂಡಲಾಗಿತ್ತು. ಗಿರಾಕಿಗಳಿಗೆ ಯುವತಿಯರ ಫೋಟೋಗಳನ್ನು ಕಳುಹಿಸಿ ಅಕ್ರಮವಾಗಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಗೋಕುಲರಸ್ತೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಭಾರಿ ಪ್ರಾಂಶುಪಾಲರ ನೇಮಕ, ಉಪನ್ಯಾಸಕರ ವರ್ಗಾವಣೆಗೆ ಮತ್ತೆ ಚಾಲನೆ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.