ಧಾರವಾಡ : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ಧಾರವಾಡ ಹೈಕೋರ್ಟ್ಗೆ ಯುವತಿಯ ತಂದೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.
ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಮಧ್ಯಾಹ್ನದ ಸುಮಾರಿಗೆ ಅರ್ಜಿ ವಿಚಾರಣೆ ನಡೆಯಲಿದೆ. ಮೇ 27 ರಂದು ಯುವತಿಯ ತಂದೆ ಮಗಳನ್ನು ಹುಡುಕಿಕೊಡಿ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸಿಡಿ ಪ್ರಕರಣ ಬೆಳಕಿಗೆ ಬಂದ ನಂತರ ಸಂತ್ರಸ್ತೆ ಸಾಕಷ್ಟು ಸುದ್ದಿಯಲ್ಲಿದ್ದರು. ಇದೀಗ ಈ ಪ್ರಕರಣ ಮತ್ತೊಂದು ಹೊಸ ತಿರುವು ಪಡೆದಿದೆ. ತಮ್ಮ ಮಗಳು ಕಳೆದ ಕೆಲ ತಿಂಗಳಿಂದ ಕಾಣೆಯಾಗಿದ್ದು, ಆಕೆಯನ್ನು ಹುಡುಕಿಕೊಡುವಂತೆ ಯುತಿಯ ತಂದೆ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಧಾರವಾಡ ಹೈಕೋರ್ಟ್ನ ವಿಭಾಗೀಯ ಪೀಠದ ಮುಂದೆ ಸಂತ್ರಸ್ತ ಯುವತಿಯ ತಂದೆ ಪ್ರಕಾಶ ಕಂಚೇರಿ ಎಂಬುವರು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದು, ಮಧ್ಯಾಹ್ನ ವಿಚಾರಣೆ ನಡೆಯಲಿದೆ.
ಓದಿ: ಮೊದಲು ನಾನವನಲ್ಲವೆಂದು ಈಗ ನಾನೇ ಎಂದರಂತೆ.. ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!?