ETV Bharat / state

ಹುಬ್ಬಳ್ಳಿ - ಧಾರವಾಡಕ್ಕೆ ಎನ್​ಎಫ್​​ಎಸ್​ಯು: ಅಮಿತ್ ಶಾ ನೇತೃತ್ವದಲ್ಲಿ ಅಡಿಗಲ್ಲು ಸಾಧ್ಯತೆ - ರಾಜ್ಯ ಸರ್ಕಾರಕ್ಕೆ ಸೂಚನೆ

ಹುಬ್ಬಳ್ಳಿ ಧಾರವಾಡ ಜನತೆಗೆ ಮತ್ತೊಂದು ಖುಷಿಯ ವಿಚಾರ. ನ್ಯಾಷನಲ್ ಫಾರೆನ್ಸಿಕ್ ಸೈನ್ಸ್ (ವಿಧಿ ವಿಜ್ಞಾನ) ಯೂನಿವರ್ಸಿಟಿ ಆಫ್ ಕ್ಯಾಂಪಸ್ (ಶಾಖೆ)ಯನ್ನು ಹುಬ್ಬಳ್ಳಿಯಲ್ಲಿ ಸ್ಥಾಪಿಸುವಂತೆ ಕೇಂದ್ರ ಸರ್ಕಾರ ಪತ್ರದ ಮೂಲಕ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ - ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.

establishment of  NFSU  at Hubli Dharwad
ಹುಬ್ಬಳ್ಳಿ-ಧಾರವಾಡಕ್ಕೆ ಎನ್​ಎಫ್​​ಎಸ್​ಯು
author img

By

Published : Jan 14, 2023, 3:41 PM IST

ಹುಬ್ಬಳ್ಳಿ: ಬಹುದಿನಗಳ ಬೇಡಿಕೆಯಾಗಿದ್ದ ರಾಷ್ಟ್ರೀಯ ವಿಧಿ ವಿಜ್ಞಾನ ಶಾಸ್ತ್ರದ ವಿಶ್ವವಿದ್ಯಾಲಯ ಕ್ಯಾಂಪಸ್ (ನ್ಯಾಷನಲ್ ಫಾರೆನ್ಸಿಕ್ ಸೈನ್ಸ್ ಯೂನಿವರ್ಸಿಟಿ-ಎನ್​ಎಫ್​​ಎಸ್​ಯು) ಹುಬ್ಬಳ್ಳಿ- ಧಾರವಾಡದಲ್ಲಿ ಸ್ಥಾಪಿಸಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದೆ. ಈ ನಿಟ್ಟಿನಲ್ಲಿ ಜನವರಿ 27ರಂದು ಅಡಿಗಲ್ಲು ಸಮಾರಂಭ ನಡೆಯುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರದ ಗೃಹ ಇಲಾಖೆಯ ಮಂಜೂರಾತಿ ಪ್ರತಿ ರಾಜ್ಯ ಸರ್ಕಾರಕ್ಕೆ ಬಂದಿದೆ.

  • ಮತ್ತೊಂದು ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಯನ್ನು ಅವಳಿ ನಗರಕ್ಕೆ ನೀಡಿದ ಮಾನ್ಯ ಪ್ರಧಾನಮಂತ್ರಿ ಶ್ರೀ @narendramodi ಜೀ ಹಾಗೂ ಕೇಂದ್ರ ಗೃಹ ಸಚಿವರಾದ ಶ್ರೀ @AmitShah ಜೀ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ.

    — Pralhad Joshi (@JoshiPralhad) January 13, 2023 " class="align-text-top noRightClick twitterSection" data=" ">

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್: ಕಳೆದ 2-3 ತಿಂಗಳ ಹಿಂದೆ ಕೇಂದ್ರ ಗೃಹ ಸಚಿವರಿಗೆ ಈ ಕುರಿತು ವಿವರವಾಗಿ ಪತ್ರ ಬರೆಯಲಾಗಿತ್ತು. ಈ ಭಾಗದಲ್ಲಿ ವಿಶ್ವವಿದ್ಯಾಲಯ ಕ್ಯಾಂಪಸ್ ಸ್ಥಾಪನೆಯ ಅಗತ್ಯತೆ ಕುರಿತು ಮನವರಿಕೆ ಮಾಡಿದ ಹಾಗೂ ನಂತರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಂಪರ್ಕದಲ್ಲಿದ್ದ ಪರಿಣಾಮವಾಗಿ ಅವಳಿ ನಗರಕ್ಕೆ ಇಂತಹ ಉನ್ನತ ಶೈಕ್ಷಣಿಕ ಸಂಸ್ಥೆ ದೊರೆತಿದೆ. ಇದು ಹೆಮ್ಮೆಯ ವಿಷಯ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮ ಬಾರಿಗೆ ಕರ್ನಾಟಕದ ಅದರಲ್ಲೂ ಹುಬ್ಬಳ್ಳಿ - ಧಾರವಾಡ ಮಹಾನಗರದಲ್ಲಿ ವಿಧಿ ವಿಜ್ಞಾನ ಶಾಸ್ತ್ರ ವಿಶ್ವವಿದ್ಯಾಲಯ ಸ್ಥಾಪಿಸಲು ಕೇಂದ್ರ ಸರ್ಕಾರದ ಒಪ್ಪಿಗೆ ಸಿಕ್ಕಿರುವುದು ಸಂತಸದ ಸಂಗತಿ ಎಂದು ತಿಳಿಸಿದ್ದಾರೆ.

  • One more Good news to Hubballi-Dharwad, The National Forensic Sciences University (NFSU) will have its off campus in our city. The central govt has issued letter to govt of karnataka in setting up of off-campus in Hubballi. The work will start once the state govt submits DPR. pic.twitter.com/rJBokXzwla

ಈ ವಿಶ್ವವಿದ್ಯಾಲಯ ಸ್ಥಾಪನೆಯಿಂದ ಅಪರಾಧಗಳ ತನಿಖಾ ಮಟ್ಟದ ತಾಂತ್ರಿಕ ಸೌಲಭ್ಯಗಳು ದೊರೆಯಲಿದೆ. ಕರ್ನಾಟಕ ಸೇರಿದಂತೆ ಸುತ್ತಲಿನ ರಾಜ್ಯಗಳಲ್ಲಿ ತನಿಖೆಗೆ ವೇಗ ಸಿಗಲಿದೆ. ಅಪರಾಧ ಶಾಸ್ತ್ರ ಹಾಗೂ ಮಾನವ ಶಾಸ್ತ್ರ, ಲೈಫ್ ಸೈನ್ಸ್, ಜಿನೆಟಿಕ್ಸ್, ಬಯೋಟೆಕ್ನಾಲಜಿ, ಪ್ರಾಣಿಶಾಸ್ತ್ರ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಪಠ್ಯಕ್ರಮ ಹಾಗೂ ಸಂಶೋಧನೆಗೆ ಬಹಳಷ್ಟು ಅನುಕೂಲವಾಗಲಿದೆ.

ಇದನ್ನೂ ಓದಿ: ಶಿವಮೊಗ್ಗದಲ್ಲೂ ವಿಧಿ ವಿಜ್ಞಾನ ಕೇಂದ್ರ ತೆರೆಯಲಾಗುವುದು: ಗೃಹ ಸಚಿವ ಆರಗ ಜ್ಞಾನೇಂದ್ರ

ಅಮಿತ್ ಶಾ ನೇತೃತ್ವದಲ್ಲಿ ಅಡಿಗಲ್ಲು ಸಾಧ್ಯತೆ: ಹುಬ್ಬಳ್ಳಿ ಧಾರವಾಡ ಜನತೆಗೆ ಮತ್ತೊಂದು ಖುಷಿಯ ವಿಚಾರ. ನ್ಯಾಷನಲ್ ಫಾರೆನ್ಸಿಕ್ ಸೈನ್ಸ್ (ವಿಧಿ ವಿಜ್ಞಾನ) ಯೂನಿವರ್ಸಿಟಿ ಆಫ್ ಕ್ಯಾಂಪಸ್ (ಶಾಖೆ)ಯನ್ನು ಹುಬ್ಬಳ್ಳಿಯಲ್ಲಿ ಸ್ಥಾಪಿಸುವಂತೆ ಕೇಂದ್ರ ಸರ್ಕಾರ ಪತ್ರದ ಮೂಲಕ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಯೋಜನೆಯ ಡಿಪಿಆರ್ ಪ್ರಸ್ತುತಪಡಿಸಿದ ನಂತರ ಮುಂದಿನ ಕಾರ್ಯ ಚಟುವಟಿಕೆಗಳು ಆರಂಭವಾಗಲಿವೆ.

ಈ ವಿಶ್ವವಿದ್ಯಾಲಯ ಸ್ಥಾಪನೆಗೆ ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಸಚಿವ ಜೋಶಿ ತಿಳಿಸಿದ್ದಾರೆ. ಜಿಲ್ಲೆಗೆ ಅಮಿತ್ ಶಾ ಆಗಮಿಸುವ ಸಂದರ್ಭದಲ್ಲಿ ಅಡಿಗಲ್ಲು ಹಾಕುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿದು ಬಂದಿದೆ.

ಶಿವಮೊಗ್ಗದಲ್ಲೂ ವಿಧಿ ವಿಜ್ಞಾನ ಕೇಂದ್ರ: ಶಿವಮೊಗ್ಗದಲ್ಲೂ ವಿಧಿ ವಿಜ್ಞಾನ ಕೇಂದ್ರ ತೆರೆಯಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇತ್ತೀಚೆಗೆ ತಿಳಿಸಿದ್ದರು. ರಾಜ್ಯಕ್ಕೆ ವಿಧಿ ವಿಜ್ಞಾನ ವಿಶ್ವ ವಿದ್ಯಾನಿಲಯ ಮಂಜೂರು ಮಾಡಬೇಕು ಎಂದು ಕೇಂದ್ರದ ಗೃಹ ಸಚಿವ ಅಮಿತಾ ಶಾ ಅವರಲ್ಲಿ ಮನವಿ ಮಾಡಲಾಗಿದೆ. ನಾನೊಬ್ಬ ಗೃಹ ಸಚಿವನಾಗಿ ಅವರ ಮುಂದೆ ಹಲವು ಬೇಡಿಕೆಗಳನ್ನು ಸಲ್ಲಿಸಿದ್ದೇನೆ. ಗುಜರಾತ್​ನಲ್ಲಿ ಬಹಳ ದೊಡ್ಡ ವಿಧಿ ವಿಜ್ಞಾನ ಪ್ರಯೋಗಾಲಯ ಇದೆ. ಅಲ್ಲಿಗೆ ರಾಜ್ಯದ ಪೊಲೀಸರನ್ನು ತರಬೇತಿಗೆ ಕಳುಹಿಸುತ್ತಿದ್ದೇವೆ. ಇಂತಹ ವಿವಿ ನಮ್ಮಲ್ಲಿ ಇದ್ದರೆ ಅನುಕೂಲವಾಗುತ್ತದೆ. ಹಣ ಇದೆ ಕ್ಯಾಬಿನೆಟ್​ನಲ್ಲಿ ತೀರ್ಮಾನ ಮಾಡಿ ಕಳುಹಿಸಿ ಎಂದು ಹೇಳಿದ್ದಾರೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ರಾಜ್ಯಕ್ಕೆ ವಿಧಿ ವಿಜ್ಞಾನ ವಿವಿ ನೀಡುವಂತೆ ಅಮಿತ್ ಶಾಗೆ ಮನವಿ: ಗೃಹ ಸಚಿವ ಆರಗ ಜ್ಞಾನೇಂದ್ರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.