ಹುಬ್ಬಳ್ಳಿ: ನಗರದ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತ ಕೋರಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿಯ ವಿವಾಹ ಆರತಕ್ಷತೆಯಲ್ಲಿ ಭಾಗಿಯಾದ ಅಮಿತ್ ಶಾ ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ತೆರಳಿದರು. ಈ ವೇಳೆ ಸಿಎಂ ಜೊತೆಗಿದ್ದರು.
ಜಿಲ್ಲೆಯಲ್ಲಿ ಐದು ಕಡೆ ಏರ್ಪಾಡಾಗಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ಅಮಿತ್ ಶಾ ಭಾಗಿಯಾಗಲಿದ್ದು, ದಾವಣಗೆರೆಯ ರಾಮ್ನಗರದಲ್ಲಿರುವ ಗಾಂಧಿ ಭವನ ಉದ್ಘಾಟಿಸಲಿದ್ದಾರೆ. ಬಳಿಕ ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮದ ಬಳಿಯ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಆವರಣದಲ್ಲಿರುವ ಕೊಂಡಜ್ಜಿ ಬಸಪ್ಪ ಸ್ಮಾರಕಕ್ಕೆ ಗೌರವಾರ್ಪಣೆ ಮಾಡುವರು. ಗ್ರಾಮದ ಹೊರ ವಲಯದಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆ ಉದ್ಘಾಟನೆ ನಡೆಯಲಿದೆ. ಜಿಎಂಐಟಿ ಕಾಲೇಜು ಅವರಣದಲ್ಲಿ ನಿರ್ಮಾಣವಾದ ಜಿಎಂಐಟಿ ಕೇಂದ್ರ ಗ್ರಂಥಾಲಯ (ಸಂಸದ ಜಿ.ಎಂ.ಸಿದ್ದೇಶ್ವರ್ ಒಡೆತನದ ಕಾಲೇಜು)ವನ್ನು ಅಮಿತ್ ಶಾ ಉದ್ಘಾಟಿಸುವರು. ಸಂಜೆ 5 ಗಂಟೆಯ ವೇಳೆಗೆ ಹುಬ್ಬಳ್ಳಿಗೆ ಜಿಎಂಐಟಿ ಹೆಲಿಪ್ಯಾಡ್ನಿಂದ ಪ್ರಯಾಣ ಬೆಳೆಸಲಿದ್ದಾರೆ.