ETV Bharat / state

ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರೇ ಕಾಂಗ್ರೆಸ್ : ಕೇಂದ್ರ ಸಚಿವ ಜೋಶಿ ವಾಗ್ದಾಳಿ - ಕೇಂದ್ರ ಸಚಿವ ಪ್ರಹ್ಲಾದ್​ ಜೋಷಿ

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಕಾಂಗ್ರೆಸ್​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

central-minister-prahlad-joshi-slams-congress-govt
ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರೇ ಕಾಂಗ್ರೆಸ್ : ಕೇಂದ್ರ ಸಚಿವ ಜೋಷಿ ವಾಗ್ದಾಳಿ
author img

By ETV Bharat Karnataka Team

Published : Aug 27, 2023, 4:36 PM IST

Updated : Aug 27, 2023, 5:12 PM IST

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ

ಹುಬ್ಬಳ್ಳಿ : ಕೋವಿಡ್ ಸೇರಿದಂತೆ ಎಲ್ಲಾ ಹಗರಣಗಳನ್ನು ಕಾಂಗ್ರೆಸ್ ಸರ್ಕಾರ ತನಿಖೆ ಮಾಡಿಸಲಿ. ಇದಕ್ಕೆ ನನ್ನ ಯಾವುದೇ ತಕರಾರು ಇಲ್ಲ. ಆದರೆ ತನಿಖೆ ಮಾಡಿಸುವ ಬದಲು ನೇರವಾಗಿ ಎಫ್​ಐಆರ್​ ದಾಖಲು ಮಾಡಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ನಗರದಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ತನಿಖಾ ಆಯೋಗಕ್ಕೆ ಮುಖ್ಯಸ್ಥರಾಗಿ ನೇಮಿಸಿರುವ ನಿವೃತ್ತ ನ್ಯಾಯಮೂರ್ತಿಗಳು ತಮ್ಮ ನಿವೃತ್ತಿಯ ನಂತರ ದಿನ ಬೆಳಗಾದರೆ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಬೇಕಂತಲೇ ನಿವೃತ್ತ ನ್ಯಾಯಮೂರ್ತಿಗಳನ್ನು ಇಟ್ಟು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುವ ಕೆಲಸ ಮಾಡಲು ಹೊರಟಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಕಾಂಗ್ರೆಸ್ ಪಕ್ಷದ ಶಾಸಕರೇ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದಾಗಿ ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ. ಯುಪಿಎ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ಆಗಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್​ನ ಅತ್ಯುನ್ನತ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಬೇಲ್ ಮೇಲೆ ಹೊರಗಡೆ ಇದ್ದಾರೆ. ಬಿಜೆಪಿ ಆಡಳಿತ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಈ ಕುರಿತ ಪಾರದರ್ಶಕ ತನಿಖೆಗೆ ನಮ್ಮ ಅಭ್ಯಂತರವಿಲ್ಲ ಎಂದರು.

ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಯುಪಿಎ ಹೆಸರನ್ನು ಬದಲಾವಣೆ ಮಾಡಿದೆ. ಬ್ರ್ಯಾಂಡ್ ಹೆಸರು ಕೆಟ್ಟು ಹೋದ ಸಂದರ್ಭದಲ್ಲಿ ಹೇಗೆ ಅಂಗಡಿ, ಫ್ಯಾಕ್ಟರಿ ಹೆಸರು ಬದಲಾವಣೆ ಮಾಡುತ್ತೇವೆ‌ಯೋ, ಹಾಗೆಯೇ ಕಾಂಗ್ರೆಸ್ ಯುಪಿಎ ಹೆಸರನ್ನು ಬದಲಾವಣೆ ಮಾಡಿದೆ. ಬ್ರ್ಯಾಂಡ್ ಹೆಸರು ಮಾತ್ರ ಬದಲಾವಣೆ ಆಗಿದೆ. ಆದರೆ ಪ್ರಾಡಕ್ಟ್ ಮಾತ್ರ ಅದೇ ಇದೆ ಎಂದು ಸಚಿವ ಜೋಶಿ ಟೀಕಿಸಿದರು.

ಚಂದ್ರಯಾನದ ಕುರಿತು ಮಾತನಾಡಿ, ಚಂದ್ರಯಾನದ ಯಶಸ್ಸು ದೇಶದ ವಿಜ್ಞಾನಿಗಳ ಹಾಗೂ ಯುವಜನರ ಉತ್ಸಾಹವನ್ನು ಹೆಚ್ಚಿಸಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಭಾರತ ತನ್ನ ನೌಕೆಯನ್ನು ಇಳಿಸಿದ್ದು, ಇದು ಭಾರತದ ಹಿರಿಮೆಗೆ ಸಾಕ್ಷಿಯಾಗಿದೆ. ಇದೀಗ ವಿಜ್ಞಾನಿಗಳಿಗೆ ಸೂಕ್ತ ಪ್ರೋತ್ಸಾಹ ದೊರೆಯುತ್ತಿರುವುದರಿಂದ 350ಕ್ಕೂ ಹೆಚ್ಚು ಉಪಗ್ರಹಗಳು ವರ್ಷದಲ್ಲಿ ಉಡಾವಣೆಯಾಗಿವೆ. ಮೊದಲು ಕೇವಲ 30ರಷ್ಟು ಇತ್ತು ಎಂದು ತಿಳಿಸಿದರು.

ಆರ್ಥಿಕತೆ ವಿಚಾರದಲ್ಲಿ ನಾವು ವಿಶ್ವದ 5 ನೇ ಆರ್ಥಿಕ ದೇಶವಾಗಿ ಹೊರಹೊಮ್ಮಿದ್ದೇವೆ. ಈ ಸಂದರ್ಭದಲ್ಲಿ ಚಂದ್ರಯಾನದ ಯಶಸ್ಸು ಬಹಳ ಮುಖ್ಯವಾಗುತ್ತದೆ. ಸ್ವಾತಂತ್ರ್ಯ ಸಿಕ್ಕ 100 ವರ್ಷದೊಳಗೆ ಭಾರತವನ್ನು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದಿಂದ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಬೇಕೆಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಕನಸಾಗಿದೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು.

ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಶಿಷ್ಟಾಚಾರ ಪಾಲಿಸಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಬಗ್ಗೆ ಪ್ರಧಾನಿ ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಭಾಷಣದಲ್ಲಿಯೂ ಮೋದಿಯವರು ಈ ಬಗ್ಗೆ ಹೇಳಿದ್ದಾರೆ. ಇದೊಂದು ವಿವಾದದ ವಿಷಯವಲ್ಲ ಎಂದು ಹೇಳಿದರು.

ಇದನ್ನೂ ಓದಿ : ಧಾರವಾಡದಿಂದ ಇಬ್ಬರು ಬಿಜೆಪಿ ನಾಯಕರು ಕಾಂಗ್ರೆಸ್​ಗೆ ಬರುವ ಮಾಹಿತಿ ಇದೆ: ಸಚಿವ ಸಂತೋಷ್​ ಲಾಡ್

Last Updated : Aug 27, 2023, 5:12 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.