ಹುಬ್ಬಳ್ಳಿ: ಬಹು ನಿರೀಕ್ಷಿತ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಇಂದು ಡಿಸಿಎಂ ಅಶ್ವತ್ಥನಾರಾಯಣ ಅವರು ಪ್ರಕಟಿಸಿದರು. ವಿವಿಧ ಕೋರ್ಸ್ಗಳಿಗೆ ನಡೆದ ಪರೀಕ್ಷೆಯ ಫಲಿತಾಂಶದಲ್ಲಿ ನಗರದ ವಿದ್ಯಾರ್ಥಿ ಶಶಾಂಕ್ ಬಾಲಾಜಿ ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದಿದ್ದಾನೆ.
ನಗರದ ಬೇಸ್ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿರುವ ಶಶಾಂಕ್ ಬಾಲಾಜಿ ಸಿಇಟಿಯಲ್ಲಿ ಮೂರನೇ ರ‍್ಯಾಂಕ್ ಪಡೆದಿದ್ದು, ಮಗನ ಈ ಸಾಧನೆಗೆ ಖುಷಿ ಪಟ್ಟಿರುವ ಪೋಷಕರು ಸಿಹಿ ತಿನಿಸಿ ಸಂಭ್ರಮಿಸಿದರು.
'ಈಟಿವಿ ಭಾರತ'ದೊಂದಿಗೆ ಮಾತನಾಡಿರುವ ಶಶಾಂಕ್, ಮೂರನೇಯ ರ‍್ಯಾಂಕ್ ನಿರೀಕ್ಷೆ ಮಾಡಿರಲಿಲ್ಲ, ರಿಸಲ್ಟ್ ತುಂಬಾ ಖುಷಿ ಕೊಟ್ಟಿದೆ. ಶಿಕ್ಷಕರು, ಪಾಲಕರ ಸಹಕಾರದಿಂದ ಸಾಧನೆ ಸಾಧ್ಯವಾಗಿದೆ. ಅಂಕ ಗಳಿಕೆ ವಿಚಾರದಲ್ಲಿ ಪೋಷಕರಿಂದ ಯಾವುದೇ ಒತ್ತಡವಿರಲಿಲ್ಲ. ಐಐಟಿಗೆ ತಯಾರಿ ಮಾಡಿಕೊಳ್ಳುತ್ತಿದ್ದೇನೆ. ಎಲ್ಲಾ ವಿದ್ಯಾರ್ಥಿಗಳು ಭಯವಿಲ್ಲದೆ ಪರೀಕ್ಷೆಯನ್ನು ಬರೆದ್ರೆ ಉತ್ತಮ ಅಂಕ ಗಳಿಸಲು ಸಾಧ್ಯ ಎಂದಿದ್ದಾರೆ.