ETV Bharat / state

ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ: 800ಕ್ಕೂ ಹೆಚ್ಚು ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ - ಸರಳ ವಾಸ್ತು ಕಂಪನಿಯ ಸಂಸ್ಥಾಪಕ

ಗುರೂಜಿ ಹತ್ಯೆಗೆ ಸಂಬಂಧಿಸಿದಂತೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಧುಮ್ಮವಾಡ ಗ್ರಾಮದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡ ವಿರುದ್ಧ ಪೊಲೀಸರು ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ.

charge-sheet-in-vastu-expert-chandra-shekhar-guruji-murder-case
ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ: 800ಕ್ಕೂ ಹೆಚ್ಚು ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ
author img

By

Published : Oct 6, 2022, 3:26 PM IST

ಹುಬ್ಬಳ್ಳಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಸರಳ ವಾಸ್ತು ಕಂಪನಿಯ ಸಂಸ್ಥಾಪಕ, ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಿಸಿ ತನಿಖಾಧಿಕಾರಿಗಳು ಹಂತಕರಿಬ್ಬರ ವಿರುದ್ಧ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಸುಮಾರು 800ಕ್ಕೂ ಹೆಚ್ಚು ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.

ಗುರೂಜಿ ಹತ್ಯೆಗೆ ಸಂಬಂಧಿಸಿದಂತೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಧುಮ್ಮವಾಡ ಗ್ರಾಮದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡ ವಿರುದ್ಧ ಪೊಲೀಸರು ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಗುರೂಜಿ ಅವರನ್ನು ಹಂತಕರಿಬ್ಬರು ಜು.5ರಂದು ಇಲ್ಲಿನ ಉಣಕಲ್ಲ ಕೆರೆ ಬಳಿಯ ಹೊಟೇಲ್​ನಲ್ಲಿ ಚಾಕುವಿನಿಂದ ಇರಿದು ಹತ್ಯೆಗೈದು ಪರಾರಿಯಾಗಿದ್ದರು. ಘಟನೆ ನಡೆದ 4 ಗಂಟೆಯೊಳಗೆ ಹಂತಕರನ್ನು ರಾಮದುರ್ಗ ಬಳಿ ಸಿನಿಮೀಯ ರೀತಿಯಲ್ಲಿ ಅಡ್ಡಗಟ್ಟಿ ಪೊಲೀಸರು ವಶಕ್ಕೆ ಪಡೆದಿದ್ದರು.

ಇದೀಗ ಬಂಧಿತರ ವಿರುದ್ಧ ಆಸ್ತಿಗೆ ಸಂಬಂಧಪಟ್ಟ ದಾಖಲೆಗಳು ಸಹಿತ ಕೊಲೆಗೆ ಸಂಬಂಧಿಸಿದ ಇನ್ನಿತರ ವಿಷಯಗಳ ಕುರಿತು ಕಲೆ ಹಾಕಲಾದ ಮಾಹಿತಿ ಹಾಗೂ ಸಂಗ್ರಹಿಸಿದ ಸಾಕ್ಷಿಗಳು ಸೇರಿ 800ಕ್ಕೂ ಹೆಚ್ಚು ಪುಟಗಳುಳ್ಳ ಚಾರ್ಜ್‌ ಶೀಟ್‌ ಸಲ್ಲಿಸಲಾಗಿದೆ ಎಂದು ಪೊಲೀಸ್ ಹಿರಿಯ ಅಧಿಕಾರಿಗಳಿಂದ ಮಾಹಿತಿ ತಿಳಿದು ಬಂದಿದೆ. ಚಂದ್ರಶೇಖರ್​ ಗುರೂಜಿ ಹತ್ಯೆಗೆ ಸಂಬಂಧಿಸಿದಂತೆ ಹುಬ್ಬಳ್ಳಿ ಧಾರವಾಡ ಎಸಿಪಿ ವಿನೋದ ಮುಕ್ತೇದಾರ ನೇತೃತ್ವದಲ್ಲಿ ಐದು ತನಿಖಾ ತಂಡ ರಚಿಸಲಾಗಿತ್ತು.

ಇದನ್ನೂ ಓದಿ: ಭಕ್ತರ ಸೋಗಿನಲ್ಲಿ ಬಂದ್ರು, ಚಾಕುವಿನಿಂದ 40ಕ್ಕೂ ಹೆಚ್ಚು ಬಾರಿ ಇರಿದ್ರು.. ಚಂದ್ರಶೇಖರ್​ ಗುರೂಜಿ ಕೊಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.