ಹುಬ್ಬಳ್ಳಿ: ಅರಣ್ಯ ಹಾಗೂ ವನ್ಯ ಜೀವಿ ಸಮೃದ್ಧಿಯ ಕುರಿತು ಸಾಕ್ಷ್ಯಚಿತ್ರ ನಿರ್ಮಿಸುವ ಹೆಸರಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಇತರರು ಸೇರಿಕೊಂಡು ಕಾನೂನು ಬಾಹಿರವಾಗಿ ಅವ್ಯವಹಾರ ಮಾಡಿದ್ದಾರೆ. ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಮಾಡಿದ್ದಾರೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್ ಆರ್ ಹಿರೇಮಠ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅವ್ಯವಹಾರ ಕುರಿತು ಮುಖ್ಯಮಂತ್ರಿ, ಕಾನೂನು ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸ್ವತಂತ್ರ ತನಿಖೆಗೆ ಒತ್ತಾಯಿಸಲಾಗಿದೆ ಎಂದು ತಿಳಿಸಿದರು.
2014ರಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಾದ ಶರತ್ ಚಂಪತಿ, ಕಲ್ಯಾಣ ವರ್ಮಾ, ಅಮೋಘವರ್ಷ ತಮ್ಮ ವೈಯಕ್ತಿಕ ಲಾಭಕ್ಕಾಗಿ ವೈಲ್ಡ್ ಕರ್ನಾಟಕ ಸಾಕ್ಷ್ಯ ಚಿತ್ರವನ್ನು ಮಾರಾಟ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡಿದ್ದಾರೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗುಸಬೇಕು ಎಂದು ಹಿರೇಮಠ ಒತ್ತಾಯಿಸಿದರು.