ಧಾರವಾಡ : ನಗರದ ಎಸ್‍ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಹಿರಿಯ ಸಾಹಿತಿ ಚನ್ನವೀರ ಕಣವಿ ಅವರ ಆರೋಗ್ಯ ಗಂಭೀರವಾಗಿದೆ ಎಂದು ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಿದೆ.
ಕಣವಿ ಅವರಿಗೆ ವೆಂಟಿಲೇಟರ್ ಮೂಲಕವೇ ಚಿಕಿತ್ಸೆ ಮುಂದುವರೆದಿದೆ. ರಕ್ತದೊತ್ತಡ ಸಹಜ ಸ್ಥಿತಿಗೆ ಬಂದಿದೆ. ಕಿಡ್ನಿ ಕಾರ್ಯದಲ್ಲಿ ಸುಧಾರಣೆ ಕಂಡು ಬಂದಿದೆ. ಶ್ವಾಸಕೋಶದಲ್ಲಿ ಸೋಂಕು ಮತ್ತೆ ಕಂಡು ಬಂದಿದೆ ಎಂದು ಮಾಹಿತಿ ನೀಡಿದ್ದಾರೆ.
ಜ.14ರಂದು ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿದಾಗ ಕೊರೊನಾ ಸೋಂಕು ದೃಢಪಟ್ಟಿತ್ತು. ಅಂದಿನಿಂದ ಚಿಕಿತ್ಸೆಗಾಗಿ ಕಣವಿಯವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದನ್ನೂ ಓದಿ: ಕಾಲೇಜು ಆವರಣದಲ್ಲಿ ಹಿಜಾಬ್, ಕೇಸರಿ ಶಾಲು ನಡೆಯಲ್ಲ: ಆರಗ ಜ್ಞಾನೇಂದ್ರ