ಹುಬ್ಬಳ್ಳಿ: ಬೆಳಗಾವಿ ವಿಧಾನಮಂಡಲ ಅಧಿವೇಶನ ಸಮಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಯ ಪುಂಡಾಟಿಕೆ ಇದೇ ಮೊದಲಲ್ಲ. ಕಳೆದ 50 ವರ್ಷದಿಂದ ಪುಂಡಾಟ ಮಾಡುತ್ತಲೇ ಬಂದಿದ್ದಾರೆ. ಅವರನ್ನು ಯಾವ ರೀತಿ ಹದ್ದುಬಸ್ತಿನಲ್ಲಿ ಇಡಬೇಕು ಎಂಬುದು ನಮಗೆ ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯ ತಮ್ಮ ನಿವಾಸದ ಬಳಿ ಮಾತನಾಡುತ್ತಾ, ಕುಕ್ಕರ್ ಬಾಂಬ್ ಕುರಿತು ಡಿ.ಕೆ ಶಿವಕುಮಾರ್ ನೀಡಿದ ಹೇಳಿಕೆಯನ್ನು ಸಿದ್ದರಾಮಯ್ಯ ಸಮರ್ಥಿಸಿಕೊಂಡ ವಿಚಾರವಾಗಿ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಅವರು ಮೊದಲು ಕೆಪಿಸಿಸಿ ಅಧ್ಯಕ್ಷರ ಹೇಳಿಕೆಯನ್ನು ಗಮನಿಸಿ ಪ್ರತಿಕ್ರಿಯೆ ನೀಡಬೇಕು. ಆಗ ಅವರ ಸ್ಥಾನಕ್ಕೆ ಘನತೆ ಬರುತ್ತದೆ ಎಂದರು.
ಮುಂದುವರೆದು, ಬೆಳಗಾವಿ ಅಧಿವೇಶನದಲ್ಲಿ ಕೆಲವು ಮಹತ್ವದ ಮಸೂದೆಗಳನ್ನು ತರುತ್ತಿದ್ದೇವೆ. ಎಸ್ಸಿ ಎಸ್ಟಿ ಮೀಸಲಾತಿ ಜಾರಿ ಮಸೂದೆ, ಉತ್ತರ ಕರ್ನಾಟಕ ಭಾಗದ ಪ್ರಮುಖ ವಿಚಾರಗಳು ಚರ್ಚೆಯಾಗಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಕರ್ನಾಟಕಕ್ಕೆ ಆಗಮಿಸಲಿದೆ ಬಿಜೆಪಿ ಅಗ್ರ ರಾಷ್ಟ್ರೀಯ ನಾಯಕರ ದಂಡು