ETV Bharat / state

ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಪ್ರಾಮಾಣಿಕ ಪ್ರಯತ್ನ : ಈರಣ್ಣ ಜಡಿ

author img

By

Published : Sep 14, 2020, 4:55 PM IST

ಪ್ರಸ್ತುತ ಅಕಾಡೆಮಿಗೆ ಸರ್ಕಾರ 3 ಕೋಟಿ ರೂ. ವಾರ್ಷಿಕ ಅನುದಾನ ನೀಡುತ್ತಿದೆ. ಮಕ್ಕಳ ಕ್ಷೇತ್ರದ ಸರ್ವಾಂಗೀಣ ಬೆಳವಣಿಗೆ ದೃಷ್ಟಿಯಿಂದ ಅನುದಾನ ಹೆಚ್ಚಿಸಲು ಸರ್ಕಾರಕ್ಕೆ ಮನವಿ ಮಾಡುವೆ..

 Eeranna jadi
Eeranna jadi

ಧಾರವಾಡ : ಮಕ್ಕಳಲ್ಲಿ ಸಾಹಿತ್ಯ, ಸಂಗೀತ, ಕಲೆ, ಶಿಕ್ಷಣ, ವೈಜ್ಞಾನಿಕ ಮನೋಭಾವ ಬೆಳೆಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ ಹೇಳಿದರು.

ನಗರದ ಅಕಾಡೆಮಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಕ್ಕಳು ಸಾಹಿತ್ಯ, ಸಂಗೀತ, ಕ್ರೀಡೆ ಸೇರಿದಂತೆ ಎಲ್ಲಾ ವಲಯಗಳಲ್ಲಿ ಬೆಳೆಯಬೇಕು.

ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಎಲ್ಲಾ ಜಿಲ್ಲೆಗಳಲ್ಲಿ ಚಟುವಟಿಕೆಗಳ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗುವುದು. ಪ್ರಸ್ತುತ ಅಕಾಡೆಮಿಗೆ ಸರ್ಕಾರ 3 ಕೋಟಿ ರೂ. ವಾರ್ಷಿಕ ಅನುದಾನ ನೀಡುತ್ತಿದೆ. ಮಕ್ಕಳ ಕ್ಷೇತ್ರದ ಸರ್ವಾಂಗೀಣ ಬೆಳವಣಿಗೆ ದೃಷ್ಟಿಯಿಂದ ಅನುದಾನ ಹೆಚ್ಚಿಸಲು ಸರ್ಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದರು.

ಬೃಹತ್‌, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮಾತನಾಡಿ, ನೂತನ ಅಧ್ಯಕ್ಷರು ಅಕಾಡೆಮಿ ಮುನ್ನೆಡೆಸಲು ಉತ್ಸುಕರಾಗಿದ್ದಾರೆ‌. ಸರ್ಕಾರದಿಂದ ಅವರಿಗೆ ಎಲ್ಲಾ ಅಗತ್ಯ ಪ್ರೋತ್ಸಾಹ ನೀಡಲಾಗುವುದು ಎಂದರು.

ಈ ವೇಳೆ ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಅರವಿಂದ ಬೆಲ್ಲದ್, ಅಮೃತ ದೇಸಾಯಿ, ವಿಧಾನಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್, ಮಾಜಿ ಶಾಸಕರಾದ ಎಸ್‌ ವಿ ಸಂಕನೂರ, ಮಾಜಿ ಶಾಸಕಿ ಸೀಮಾ ಮಸೂತಿ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.