ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶದ 90ರಷ್ಟು ಜನರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲೂ ಕೂಡ ಸಿಎಎ ಹಾಗೂ ಎನ್ಆರ್ಸಿಗೆ ಛೀಮಾರಿ ಹಾಕುತ್ತಿದ್ದಾರೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿಂದು ಸಿಎಎ ವಿರೋಧಿಸಿ ದಲಿತ ಸಂಘಟನೆಗಳು ನಡೆಸಿದ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು, ಇಷ್ಟು ವಿರೋಧದ ಮಧ್ಯವೂ ಕೂಡ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜನ ವಿರೋಧಿ ಕಾಯ್ದೆಯನ್ನು ಏಕೆ ಜಾರಿಗೊಳಿಸಿದರು ಅನ್ನೋದು ಅರ್ಥವಾಗುತ್ತಿಲ್ಲ ಎಂದರು.
ಜನರು ಎರಡು ಬಾರಿ ಅವರಿಗೆ ಜನಾದೇಶ ಕೊಟ್ಟಿರಬಹುದು. ಆದರೆ, ಜನಾದೇಶ ಕೊಟ್ಟಿರುವುದು ಸಂವಿಧಾನದ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಲು ಹೊರತು ತಮ್ಮ ಇಚ್ಛೆಗೆ ಅನುಸಾರವಾಗಿ ಕಾಯ್ದೆಗಳನ್ನು ಜಾರಿಗೊಳಿಸಿ ಜನರ ನೆಮ್ಮದಿಯನ್ನು ಹಾಳು ಮಾಡಲು ಅಲ್ಲವೆಂದು ಅವರು ಕೇಂದ್ರ ಸರ್ಕಾರದ ವಿರುದ್ಧ ಶಾಸಕ ಕಿಡಿಕಾರಿದ್ರು.