ಧಾರವಾಡ: ಸರ್ಕಾರದ ಆದೇಶದನ್ವಯ ಗುತ್ತಿಗೆ ಪೌರಕಾರ್ಮಿಕರಿಗೆ ನೇರ ನೇಮಕಾತಿ, ನೇರ ವೇತನ ಪಾವತಿಸಲು ಹಾಗೂ ವಾಹನ ಚಾಲಕರನ್ನು ಕೆಲಸಕ್ಕೆ ತೆಗೆದುಕೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಪೌರ ಕಾರ್ಮಿಕರ ಮತ್ತು ನೌಕರರ ಸಂಘದ ವತಿಯಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಜಮಾಯಿಸಿದ ಪೌರಕಾರ್ಮಿಕರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಇದೇ ಕಾರಣಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಟೋ ಟಿಪ್ಪರ್ ವಾಹನ ಚಾಲಕರು ಉಪವಾಸ ಕೈಗೊಂಡಿದ್ದಾರೆ.
ರಾಜ್ಯ ಸರ್ಕಾರದ ಆದೇಶದಂತೆ ಗುತ್ತಿಗೆ ಪೌರಕಾರ್ಮಿಕರಿಗೆ ನೇರ ನೇಮಕಾತಿ, ನೇರ ವೇತನ ಪಾವತಿ ಅನುಷ್ಠಾನ, ವಿವಿಧ ವ್ಯತ್ಯಾಸದ ಬಾಕಿ ಮೊತ್ತ ಪಾವತಿಸಲು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಕೆಲಸದಿಂದ ನಿಲ್ಲಿಸಿರುವ 51 ಜನ ಆಟೋ ಟಿಪ್ಪರ್ ವಾಹನ ಚಾಲಕರನ್ನು ಕೂಡಲೇ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.