ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಳೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಗಫಾರ್ ಜರತಾರಘರ್ ಎಂಬುವವನೇ ಗಂಭೀರವಾಗಿ ಗಾಯಗೊಂಡ ವ್ಯಕ್ತಿ. ಪರ್ವೇಜ್ ಗುಂಪಿನ ಕಡೆಯವರು ತಲ್ವಾರ್ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಇನ್ನೂ ಘಟನೆಯಲ್ಲಿ ಗಫಾರ್ ತಲೆಗೆ ಗಂಭೀರ ಗಾಯಗಳಾಗಿದ್ದು, ಈತನನ್ನು ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಕುರಿತು ಹಳೆಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.