ಹುಬ್ಬಳ್ಳಿ: ವ್ಯಾಪಾರಸ್ಥರ ತೀವ್ರ ವಿರೋಧದ ನಡುವೆ ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯ ಜನತಾ ಬಜಾರ್ ತೆರವು ಕಾರ್ಯಾಚರಣೆಯನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಆರಂಭಿಸಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಜನತಾ ಬಜಾರ್ ನವೀಕರಣ ಹಿನ್ನೆಲೆ ತೆರವು ಮಾಡಲಾಗುತ್ತಿದ್ದು, ಸ್ಥಳೀಯ ವ್ಯಾಪರಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಹಲವು ಬಾರಿ ನೋಟಿಸ್ ನೀಡಿ ಇಂದು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಹೊಸೂರು ಬಳಿ ವ್ಯಾಪಾರಸ್ಥರಿಗೆ ಸ್ಥಳಾವಕಾಶ ಕೊಡಲಾಗಿದೆ.
ಆದ್ರೆ ಅಲ್ಲಿ ಯಾವುದೇ ಮೂಲ ಸೌಕರ್ಯವಿಲ್ಲ. ಮಳಿಗೆ ಸ್ಥಾಪಿಸದೇ ಸ್ಥಳಾಂತರ ಮಾಡುತ್ತಿದ್ದಾರೆ ಎಂದು ವ್ಯಾಪಾರಸ್ಥರು ಆರೋಪಿಸಿದ್ದಾರೆ. 170ಕ್ಕೂ ಹೆಚ್ಚು ಮಳಿಗೆಗಳನ್ನು ಮಹಾನಗರ ಪಾಲಿಕೆ ತೆರವು ಮಾಡುತ್ತಿದ್ದು, ಸ್ಥಳದಲ್ಲಿ ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು ಬೀಡುಬಿಟ್ಟಿದ್ದಾರೆ.