ಹುಬ್ಬಳ್ಳಿ: ಎಸ್ಸಿ, ಎಸ್ಟಿ ಮೀಸಲಾತಿ ಜಾರಿ ಕುರಿತು ಗೆಜೆಟ್ ನೋಟಿಫಿಕೇಶನ್ ಜಾರಿ ಮಾಡಲಾಗಿದೆ. ಈ ಸುಗ್ರೀವಾಜ್ಞೆಯನ್ನು ಉಭಯ ಸದನಗಳಲ್ಲಿ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಈ ಬಿಲ್ ಮೇಲೆ ಸುದೀರ್ಘ ಚರ್ಚೆ ನಡೆಸಲಾಗುವುದು. ಆ ನಂತರ ಎರಡೂ ಸದನಗಳಲ್ಲಿ ಬಿಲ್ ಪಾಸ್ ಮಾಡಲಾಗುವುದು. ಪಂಚಮಸಾಲಿ ಸೇರಿದಂತೆ ಎಲ್ಲವೂ ಮೀಸಲಾತಿ ಕುರಿತು ಬೇರೆ ಬೇರ ಹಂತಗಳಲ್ಲಿ ಚರ್ಚಾ ಹಂತದಲ್ಲಿವೆ. ಆಯಾ ಆಯೋಗದ ವರದಿ ನಂತರ ಅದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಇದೇ ವೇಳೆ ಭರವಸೆ ನೀಡಿದರು.
ಮುಸ್ಲಿಂ ಸೇರಿದಂತೆ ಇತರ ಜಾತಿಗಳ ಮೀಸಲಾತಿ ವಾಪಸ್ ಪಡೆಯುವ ಕುರಿತು ನಾನು ಏನೂ ಹೇಳುವುದಿಲ್ಲ. ಈ ಮೀಸಲಾತಿ ಕುರಿತು ಸಂವಿಧಾನದ ಅಡಿಯಲ್ಲಿ ಚರ್ಚೆ ನಡೆಯಲಿದೆ. ಈ ಕುರಿತು ಕೆಲ ಶಾಸಕರ ಹೇಳಿಕೆ ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದರು.
ಇದನ್ನೂ ಓದಿ: ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ: ಸರ್ಕಾರ ಹೊರಡಿಸಲಿರುವ ಸುಗ್ರೀವಾಜ್ಞೆಯಲ್ಲಿ ಏನಿರಲಿದೆ?