ETV Bharat / state

ಕಚ್ಚಾ ಮನೆಗಳನ್ನು ಪಕ್ಕಾ ಮಾಡಲು ಚಿಂತನೆ ನಡೆದಿದೆ: ಸಿಎಂ ಬೊಮ್ಮಾಯಿ - state rain

ಮಳೆ ಹಾನಿ ಪರಿಹಾರಕ್ಕೆ ಸಂಬಂಧಪಟ್ಟ ಕಾರ್ಯಗಳು ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.

CM Basavaraja Bommai
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
author img

By

Published : Jul 16, 2022, 4:51 PM IST

ಹುಬ್ಬಳ್ಳಿ: ರಾಜ್ಯದಲ್ಲಿ ಮಳೆ, ಪ್ರವಾಹ ಹಿನ್ನೆಲೆ ಈಗಾಗಲೇ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ಮಹಾರಾಷ್ಟ್ರ ಹಾಗೂ ನಮ್ಮ ರಾಜ್ಯದ ಡಿಸಿಗಳು ಸಂಪರ್ಕದಲ್ಲಿರುವಂತೆ ಸೂಚನೆ ನೀಡಲಾಗಿದೆ. ನದಿಗಳ ಪ್ರವಾಹಕ್ಕೆ ಸಂಬಂಧಿಸಿದಂತೆ ಶಾಶ್ವತ ಪರಿಹಾರ ನೀಡಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ತಾಂತ್ರಿಕ ದೋಷದಿಂದ ಎರಡೂವರೇ ಲಕ್ಷ ಮನೆಗಳ ಮಂಜೂರಾತಿ ವಿಳಂಬವಾಗಿತ್ತು. ಈಗ ಅದನ್ನು ಸರಿಪಡಿಸಲಾಗಿದೆ. ಕಚ್ಚಾ ಮನೆಗಳನ್ನು ಪಕ್ಕಾ ಮಾಡಲು ಚಿಂತನೆ ನಡೆದಿದೆ ಎಂದರು.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ರಾಜ್ಯದ ನೆರೆ ನಷ್ಟದ ಬಗ್ಗೆ ವರದಿ ತಯಾರಿಸಿ ಶೀಘ್ರವಾಗಿ ಕೇಂದ್ರಕ್ಕೆ ಸಲ್ಲಿಸಲಾಗುತ್ತದೆ. ಇನ್ನೂ ಈಗಾಗಲೇ ಎಲ್ಲಾ ಉಸ್ತುವಾರಿಗಳು ಅವರಿಗೆ ಸಂಬಂಧಪಟ್ಟ ಜಿಲ್ಲೆಯಲ್ಲಿ ಪ್ರವಾಹಕ್ಕೆ ಸಂಬಂಧಿಸಿದಂತೆ ಕಾರ್ಯೋನ್ಮುಖರಾಗಿದ್ದು ನಿತ್ಯ ಅವರ ಸಂಪರ್ಕದಲ್ಲಿದ್ದೇನೆಂದು ತಿಳಿಸಿದರು.

ಇದನ್ನೂ ಓದಿ: ಹಾವೇರಿ: ನದಿ ಮಧ್ಯೆ ಸಿಲುಕಿದ್ದ ಕುದುರೆ... ದಡ ಸೇರಿಸಿದ ಅಗ್ನಿ ಶಾಮಕ ಸಿಬ್ಬಂದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.