ಹುಬ್ಬಳ್ಳಿ : ಎಂಇಎಸ್ ಪುಂಡಾಟಿಕೆ ವಿರೋಧಿಸಿ ಡಿಸೆಂಬರ್ 31ರಂದು ನಡೆಯಬೇಕಿದ್ದ ಬಂದ್ಗೆ ಕರೆ ನೀಡದಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕನ್ನಡ ಪರ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ.
ನಗರದಲ್ಲಿಂದು ಕಾರ್ಯಕಾರಣಿ ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕನ್ನಡ ಪರ ಸಂಘಟನೆಗಳ ಆಶಯದಂತೆ ಕಟ್ಟುನಿಟ್ಟಿನ ಹಾಗೂ ಕಾನೂನು ಕ್ರಮಗಳನ್ನು ತೆಗೆದುಕೊಂಡಿದ್ದೇವೆ.
ಬಂದ್ ಮಾಡುವುದು ಎಲ್ಲದಕ್ಕೂ ಉತ್ತರವಲ್ಲ. ಅದೇ ರೀತಿ ಪರಿಹಾರ ಕೂಡ ಅಲ್ಲ. ಈ ನಿಟ್ಟಿನಲ್ಲಿ ರಾಜ್ಯ ಬಂದ್ ಕರೆ ನೀಡುವುದು ಬೇಡ ಎಂದು ಮಾಧ್ಯಮದ ಮೂಲಕ ಕನ್ನಡಪರ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ.
ಎಂಇಎಸ್ ಬ್ಯಾನ್ ವಿಷಯದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ತನಿಖೆ ನಡೆಯುತ್ತಿದೆ. ಅಲ್ಲದೇ, ಇದರ ಬಗ್ಗೆ ಅಧಿವೇಶನದಲ್ಲಿಯೂ ಕೂಡ ಚರ್ಚೆ ಮಾಡಿದ್ದೇನೆ. ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಅಲ್ಲದೇ, ಜನರು ಈಗ ಕೋವಿಡ್ನಿಂದ ಹೊರ ಬಂದಿದ್ದಾರೆ. ಬಂದ್ಗೆ ಕರೆ ನೀಡುವುದು ಸಮಂಜಸವಲ್ಲ ಎಂದು ಅವರು ಹೇಳಿದರು.