ETV Bharat / state

ಧಾರವಾಡದಲ್ಲಿ ಎನ್‌ಡಿಎ ಮಾದರಿಯ ಪೊಲೀಸ್ ತರಬೇತಿ ಕೇಂದ್ರ: ಸಿಎಂ ಬೊಮ್ಮಾಯಿ

'ಬಿಯಾಂಡ್ ಬೆಂಗಳೂರು' ಕಾರ್ಯಕ್ರಮದಡಿ ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳೂ ಸೇರಿ ಎರಡನೇ ಹಂತದ ಒಟ್ಟು 6 ನಗರಗಳಿಗೆ ಹೊಂದಿಕೊಂಡು ವಿಸ್ತೃತ ಹೊಸ ನಗರಗಳನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

CM launched various projects in Hubli
ಬಸವರಾಜ ಬೊಮ್ಮಾಯಿ
author img

By

Published : Sep 5, 2022, 8:23 AM IST

ಹುಬ್ಬಳ್ಳಿ: ಧಾರವಾಡದಲ್ಲಿರುವ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಆವರಣದಲ್ಲಿ ಪುಣೆಯ ಖಡಕ್‌ವಾಸ್ಲಾದ ಎನ್.ಡಿ.ಎ.ಮಾದರಿಯ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು. ತಂತ್ರಜ್ಞಾನ, ವಿಜ್ಞಾನ ಆಧರಿಸಿ ಸೈಬರ್ ಅಪರಾಧಗಳ ತ್ವರಿತ ಪತ್ತೆಗೆ ಕೌಶಲ್ಯವನ್ನು ಪೊಲೀಸರು ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸುಧಾರಣೆಗಳನ್ನು ತರಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಸಬಾಪೇಟ ಹಾಗೂ ದಕ್ಷಿಣ ಸಂಚಾರ ಪೊಲೀಸ್ ಠಾಣೆಗಳ ಉದ್ಘಾಟನೆ ಮತ್ತು ಗೋಕುಲ ರಸ್ತೆ, ವಿದ್ಯಾನಗರ ಹಾಗೂ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಧಾರವಾಡದಲ್ಲಿ ಎನ್‌ಡಿಎ ಮಾದರಿಯ ಪೊಲೀಸ್ ತರಬೇತಿ ಕೇಂದ್ರ

ಹುಬ್ಬಳ್ಳಿಯಲ್ಲಿ ಟ್ರಾಫಿಕ್ ಕಂಟ್ರೋಲ್ ಕಮಾಂಡ್ ಸೆಂಟರ್ ಸ್ಥಾಪನೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ಹಣ ಒದಗಿಸಬಹುದು. ಸೂಕ್ತ ಪ್ರಸ್ತಾವನೆ ಬಂದರೆ ರಾಜ್ಯ ಸರ್ಕಾರ ಹಣ ಒದಗಿಸಲಿದೆ. ತಂತ್ರಜ್ಞಾನದ ದುರುಪಯೋಗ ತಡೆಯಬೇಕು. ಡಿಜಿಟಲ್ ಹಾಗೂ ಸೈಬರ್ ಅಪರಾಧಗಳ ಪತ್ತೆ ಕಾರ್ಯದಲ್ಲಿ ಇನ್ನೂ ಸುಧಾರಣೆ ತರಲಾಗುವುದು. ಅಭಿವೃದ್ಧಿಯ ವಿಷಯದಲ್ಲಿ ಅಧಿಕಾರಿಗಳು ಸಕಾರಾತ್ಮಕವಾಗಿ ಕ್ರಿಯಾಶೀಲವಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಚೌಕಟ್ಟಿನಲ್ಲಿ ಜನರಿಗೆ ನೆರವು ನೀಡಲು ಅಧಿಕಾರಿಗಳು ಹಿಂದೇಟು ಹಾಕಬಾರದು ಎಂದು ಸಿಎಂ ಹೇಳಿದರು.

'ಬಿಯಾಂಡ್ ಬೆಂಗಳೂರು' ಕಾರ್ಯಕ್ರಮದಡಿ ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳೂ ಸೇರಿ ಎರಡನೇ ಹಂತದ ಒಟ್ಟು 6 ನಗರಗಳಿಗೆ ಹೊಂದಿಕೊಂಡು ವಿಸ್ತೃತ ಹೊಸ ನಗರಗಳನ್ನು ನಿರ್ಮಿಸಲಾಗುವುದು. ಹುಬ್ಬಳ್ಳಿಯಲ್ಲಿ ಜಯದೇವ ಹೃದ್ರೋಗ ಪ್ರಾದೇಶಿಕ ಕೇಂದ್ರದ ಸ್ಥಾಪನೆಗೆ ಶೀಘ್ರ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದರು.

ಇದನ್ನೂ ಓದಿ: ಶೀಘ್ರದಲ್ಲೇ 900 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ : ಗೃಹ ಸಚಿವ ಆರಗ ಜ್ಞಾನೇಂದ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.