ಹುಬ್ಬಳ್ಳಿ: ಬೆಂಗಳೂರು ಹೊರತುಪಡಿಸಿ 2ನೇ ಸ್ತರದ ನಗರಗಳ ಅಭಿವೃದ್ಧಿ ಹಾಗೂ ಕೈಗಾರಿಕೆಗಳನ್ನು ಸೆಳೆಯುವ ಬಿಯಾಂಡ್ ಬೆಂಗಳೂರು(Beyond Bengaluru) ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು.
ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿ ವರ್ಚುವಲ್ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್, ಶಾಸಕ ಅರವಿಂದ್ ಬೆಲ್ಲದ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಆವಿಷ್ಕಾರ ಮತ್ತು ಎರಡನೇ ಸ್ತರದ ನಗರಗಳ ಬೆಳವಣಿಗೆ ಕುರಿತಂತೆ ಉದ್ಯಮಿಗಳು, ತಂತ್ರಜ್ಞರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿ ಸಲಹೆ ಸೂಚನೆ ನೀಡಿದರು.
ಔದ್ಯೋಗಿಕವಾಗಿ ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿಯಲ್ಲಿ ಬೆಂಗಳೂರಿನಂತೆ ಅಭಿವೃದ್ಧಿ ಹಾಗೂ ಕೈಗಾರಿಕೆಗಳ ಆಕರ್ಷಣೆಗೆ ಒತ್ತು ನೀಡುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು.
ಇದನ್ನು ಓದಿ: ದೆಹಲಿಯಲ್ಲಿ ಸೋನಿಯಾ ಭೇಟಿಯಾದ ಸಿದ್ದರಾಮಯ್ಯ; ಒಂದೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ