ETV Bharat / state

ಸಾಮಾನ್ಯ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ - ಬಿ ಕೆ ಹರಿಪ್ರಸಾದ್​ ಪರೋಕ್ಷವಾಗಿ ವಾಗ್ದಾಳಿ

ಕಾಂಗ್ರೆಸ್​ ನಾಯಕ ಬಿ ಕೆ ಹರಿಪ್ರಸಾದ್​ ಪರೋಕ್ಷವಾಗಿ ವಾಗ್ದಾಳಿ ನಡೆಸಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

cm-siddaramaih-reaction-on-bk-hariprasad-statement
ಸಾಮಾನ್ಯ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Sep 9, 2023, 6:02 PM IST

ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಧಾರವಾಡ : ಕಾಂಗ್ರೆಸ್​ ನಾಯಕ ಬಿ.ಕೆ ಹರಿಪ್ರಸಾದ್ ಅವರು ಪರೋಕ್ಷ ವಾಗ್ದಾಳಿ ನಡೆಸಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಜನರಲ್​ ಸ್ಟೇಟ್​ಮೆಂಟ್​ಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಹರಿಪ್ರಸಾದ್​ ಹೇಳಿಕೆಗೆ ಪ್ರತಿಕ್ರಿಯಿಸಿ, ನಾನು ಇದಕ್ಕೆ ಪ್ರತಿಕ್ರಿಯಿಸುವುದಿಲ್ಲ. ಅವರು ನನ್ನ ಹೆಸರು ಹೇಳಿದ್ರಾ ?. ನನ್ನ ಹೆಸರನ್ನು ಎಲ್ಲಿಯಾದರೂ ಪ್ರಸ್ತಾಪ ಮಾಡಿದ್ದಾರಾ?. ಸಾಮಾನ್ಯ ಹೇಳಿಕೆಗೆ ಪ್ರತಿಕ್ರಿಯಿಸುವ ಅಗತ್ಯತೆ ಇಲ್ಲ ಎಂದು ಹೇಳಿದರು.

ಮಹದಾಯಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಆಸಕ್ತಿ ವಹಿಸುತ್ತಿಲ್ಲ. ಕೇಂದ್ರ ಸರ್ಕಾರವು ಅರಣ್ಯ ಇಲಾಖೆ ಮತ್ತು ಪರಿಸರ ಇಲಾಖೆ ಕ್ಲಿಯರೆನ್ಸ್​ ನೀಡಬೇಕು. ಕ್ಲಿಯರೆನ್ಸ್​ ನೀಡಿದ ಕೂಡಲೇ ನಾವು ಟೆಂಡರ್​ ಕರೆಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್​ ಪರೋಕ್ಷ ವಾಗ್ದಾಳಿ : ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಸಭೆಯಲ್ಲಿ ಕಾಂಗ್ರೆಸ್​ ಮುಖಂಡ ಬಿ.ಕೆ ಹರಿಪ್ರಸಾದ್​ ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಅವರು, ಕೆಲವರು ಪಂಚೆ ಹಾಕಿಕೊಂಡು ಹೂಬ್ಲೆಟ್ ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿಕೊಂಡು ಸಮಾಜವಾದಿ ಅಂತ ಹೇಳಿದರೆ ಆಗೋದಿಲ್ಲ ಎಂದು ಟೀಕಿಸಿದ್ದರು.

ಹಿಂದಿನ ಯಾವ ಮುಖ್ಯಮಂತ್ರಿಗಳೂ ಜಾತಿ ರಾಜಕಾರಣ ಮಾಡಲಿಲ್ಲ. ಬಂಗಾರಪ್ಪನವರು ಎಲ್ಲ ಜಾತಿ, ಬಡವರಿಗೆ ಅನುಕೂಲ ಆಗಲೆಂದು ಕಾರ್ಯಕ್ರಮಗಳನ್ನು ರೂಪಿಸಿದ್ದರು. ಕಾಗೋಡು ತಿಮ್ಮಪ್ಪ ಅವರು ಕೂಡ ಸಮಾಜವಾದಿಯಾಗಿದ್ದರು. ಸಾಮಾಜವಾದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಕಾಗೋಡು ತಿಮ್ಮಪ್ಪನವರು ಸಮಾಜವಾದಿ ಅಂದುಕೊಂಡು ಮಜಾವಾದಿಯಾಗಿರಲಿಲ್ಲ. ಸಮಾಜವಾದ ಎಂದರೆ ಎಲ್ಲರಿಗೂ ಸಮಾನ ಹಕ್ಕನ್ನು ಕಲ್ಪಿಸುವುದು ಎಂದು ಹೇಳಿದರು.

ಜನರು ತಕ್ಕ ಪಾಠ ಕಲಿಸುತ್ತಾರೆ : ಚುನಾವಣೆ ವೇಳೆ ಎಲ್ಲರೂ ಹಿಂದುಳಿದ ವರ್ಗದ ಬಗ್ಗೆ ಮಾತನಾಡುತ್ತಾರೆ. ಬಳಿಕ ಹಿಂದುಳಿದ ವರ್ಗವನ್ನು ಮರೆಯುತ್ತಾರೆ. ಅಧಿಕಾರಿ ಸಿಕ್ಕ ಬಳಿಕ ಅಹಂಕಾರ ಮಾಡಿದರೆ ಜನರು ತಕ್ಕ ಪಾಠ ಕಲಿಸುತ್ತಾರೆ. ಇದು ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಎಲ್ಲರಿಗೂ ಗೊತ್ತಾಗಿದೆ ಎಂದು ಹೇಳಿದರು.

ಡಾ. ಜಿ ಪರಮೇಶ್ವರ್ ಅವರು ದೀರ್ಘಾವಧಿಗೆ ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಅವರಿಗೆ ಸಿಎಂ ಆಗುವ ಎಲ್ಲಾ ಅರ್ಹತೆಗಳಿತ್ತು. ಆದರೆ, ಸಿಎಂ ಇರಲಿ ಡಿಸಿಎಂ ಸ್ಥಾನವನ್ನು ಕೊಡಲಾಗಲಿಲ್ಲ. ನಾನೊಬ್ಬ ಸರ್ಕಾರ ಮಾಡಿದ್ದೇನೆ. ನನಗೆ ಇಷ್ಟ ಬಂದ ಹಾಗೆ ಮಾಡುತ್ತೇನೆ ಎಂಬ ಗುಂಗಿನಲ್ಲಿದ್ದರೆ ಜನ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದ್ದರು.

ಇದನ್ನೂ ಓದಿ : ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಸಭೆ: ಸಿಎಂ ವಿರುದ್ಧ ಹರಿಪ್ರಸಾದ್ ಪರೋಕ್ಷ ವಾಗ್ದಾಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.