ಧಾರವಾಡ: ಸುಮಾರು ಎಂಟು ತಿಂಗಳ ನಂತರ ಮರಾಠಾ ವಿದ್ಯಾ ಪ್ರಸಾರಕ ಮಂಡಳದ ಛತ್ರಪತಿ ಶಿವಾಜಿ ಮಹಾರಾಜ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಬಿ.ಎ. ಮತ್ತು ಬಿ.ಕಾಂ ಅಂತಿಮ ವರ್ಷದ ತರಗತಿಗಳು ನಡೆದವು. ಆದರೆ, ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳು ಮಾತ್ರ ಹಾಜರಾಗಿದ್ದರು.
ಈ ಕುರಿತು ಮಾತನಾಡಿದ ಪ್ರಾಂಶುಪಾಲರಾದ ಎಂ.ಎಸ್. ಗಾಣಿಗೇರ, ಕೊರೊನಾ ಮುಂಜಾಗೃತ ಕ್ರಮಗಳನ್ನು ಅನುಸರಿಸಿ ತರಗತಿಗಳನ್ನು ಆರಂಭಿಸಲಾಗಿದೆ. ಕಾಲೇಜು ಆರಂಭದಲ್ಲಿಯೇ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳಿಗೆ ಕೊವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದೆ.
ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಅಂತರ ಮತ್ತು ಸ್ವಚ್ಛತೆಯ ಬಗ್ಗೆ ತಿಳಿ ಹೇಳಲಾಗಿದೆ. ಒಟ್ಟಾರೆ ಕೊರೊನಾ ಮಧ್ಯೆಯೂ ಸರ್ಕಾರದ ಆದೇಶದಂತೆ ಕಾಲೇಜುಗಳನ್ನು ಆರಂಭಿಸಲಾಗಿದೆ ಎಂದರು.
ವಿದ್ಯಾರ್ಥಿಗಳಿಗೆ ಬಸ್ ಪಾಸ್ ವ್ಯವಸ್ಥೆ ಇಲ್ಲದೆ ಇರುವುದರಿಂದ ಕಾಲೇಜಿಗೆ ಬರಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸರ್ಕಾರ ಬೇಗನೆ ಮಕ್ಕಳಿಗೆ ಪಾಸ್ ವ್ಯವಸ್ಥೆಯನ್ನು ಮಾಡಿಕೊಡಬೇಕು ಎಂದು ಮನವಿ ಮಾಡಿದರು.