ETV Bharat / state

Power tariff hike: ವಿದ್ಯುತ್ ದರ ಹೆಚ್ಚಳಕ್ಕೆ‌ ಖಂಡನೆ: ಕರ್ನಾಟಕ ಬಂದ್​ಗೆ ವಿವಿಧೆಡೆ ವಾಣಿಜ್ಯೋದ್ಯಮಿಗಳ ಬೆಂಬಲ..

ವಿದ್ಯುತ್ ದರ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಕರ್ನಾಟಕ ಬಂದ್​ಗೆ ಕರೆ ನೀಡಲಾಗಿತ್ತು. ಹುಬ್ಬಳ್ಳಿ- ಧಾರವಾಡ, ಹಾವೇರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬಂದ್​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

Electricity Rate Increase
ವಿವಿಧೆಡೆ ಕರ್ನಾಟಕ ಬಂದ್​ಗೆ ಉತ್ತಮ ಪ್ರತಿಕ್ರಿಯೆ
author img

By

Published : Jun 22, 2023, 7:44 PM IST

ವಿದ್ಯುತ್ ದರ ಹೆಚ್ಚಳಕ್ಕೆ‌ ಖಂಡನೆ: ವಿವಿಧೆಡೆ ಕರ್ನಾಟಕ ಬಂದ್​ಗೆ ಉತ್ತಮ ಪ್ರತಿಕ್ರಿಯೆ..

ಹುಬ್ಬಳ್ಳಿ: ಕೈಗಾರಿಕೋದ್ಯಮಕ್ಕೆ ಹೊರೆಯಾದ ವಿದ್ಯುತ್ ದರ ಏರಿಕೆ ಖಂಡಿಸಿ ರಾಜ್ಯಾದ್ಯಂತ ನೀಡಲಾದ ಬಂದ್ ಕರೆಗೆ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸೇರಿದಂತೆ ಕೈಗಾರಿಕಾ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ. ಕರ್ನಾಟಕ ಬಂದ್​ಗೆ ಕರೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ವಿವಿಧ ವಾಣಿಜ್ಯೋದ್ಯಮಿಗಳು ಬಂದ್​ಗೆ ಬೆಂಬಲ ನೀಡಿದ್ದು, ಧಾರವಾಡ ಜಿಲ್ಲೆಯ ಬಹುತೇಕ ಉದ್ಯಮ‌ ಸ್ತಬ್ಧವಾಗಿವೆ. ಕೈಗಾರಿಕೆ, ಟ್ರಾನ್ಸ್ ಪೋರ್ಟ್, ಅಟೋಮೊಬೈಲ್, ಜವಳಿ ವ್ಯಾಪಾರಸ್ಥರು ಸೇರಿದಂತೆ ವಿವಿಧ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು. ನೆಹರೂ ಮೈದಾನದ ಬಳಿ ಇರುವ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ ಆರಂಭವಾದ ನಗರದ ವಿವಿಧ ಕಡೆ ಸಂಚರಿಸಿ ‌ನಗರದ ತಹಶಿಲ್ದಾರ್​ ಕಚೇರಿವರೆಗೂ ನಡೆಯಿತು.‌ ತಹಶಿಲ್ದಾರ್​ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.

''ಹಿಂದಿನ ವಿದ್ಯುತ್ ದರವನ್ನು ಯಥಾವತ್ತಾಗಿ ಮುಂದುವರೆಸಿಕೊಂಡು ಹೋಗಬೇಕು. ವಿದ್ಯುತ್ ದರದಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಒಂದು ವೇಳೆ ಪ್ರಸಕ್ತ ದರವನ್ನು ಜಾರಿಗೊಳಿಸಿದ್ರೆ ಕೈಗಾರಿಕೆಗಳನ್ನು ನಡೆಸುವುದು ತುಂಬಾ ಕಷ್ಟವಾಗುತ್ತದೆ'' ಎಂದು ಕಿಡಿಕಾರಿದರು.

ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ವಿನಯ್​ ಜವಳಿ ಮಾತನಾಡಿ, ಕೆಇಆರ್​ಸಿ ಅವರು ಸಾರ್ವಜನಿಕರು, ಕಾರ್ಖಾನೆಗಳ ಮಾಲೀಕರ ಜೊತೆ ಚರ್ಚೆ ನಡೆಸದೆ ಏಕಾಏಕಿಯಾಗಿ ದರ ಏರಿಕೆ ಮಾಡಿದ್ದಾರೆ. ಇದರಿಂದ ಸಣ್ಣ, ಅತೀ ಸಣ್ಣ, ಮಾಧ್ಯಮ ಹಾಗೂ ದೊಡ್ಡ ಕೈಗಾರಿಕೆ ನಡೆಸುವುದು ಕಷ್ಟವಾಗಲಿದೆ. ಕೂಡಲೇ ಕೆಇಆರ್​ಸಿ ದರವನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.

ಜವಳಿ ವ್ಯಾಪಾರಿ ಮುಖೇಶ ಮಾತನಾಡಿ, ಜವಳಿ ವ್ಯಾಪಾರಕ್ಕೆ ವಿದ್ಯುತ್ ದರ ಏರಿಕೆ ಶಾಕ್ ಕೊಟ್ಟಿದೆ. ಇದರಿಂದ ಜವಳಿ ವ್ಯಾಪಾರ ನಡೆಸುವುದು ಕಷ್ಟವಾಗಿದೆ. ಈ ಹಿಂದೆ ಇದ್ದ ದರ ಸರಿಯಾಗಿತ್ತು. ಆದ್ರೆ ಪರಿಷ್ಕೃತ ದರದಲ್ಲಿ ಭಾರಿ ಏರಿಕೆ ಮಾಡಿದ್ದರಿಂದ ಜವಳಿ ವ್ಯಾಪಾರ ನಡೆಸುವುದು ಕಷ್ಟವಾಗಿದೆ ಎಂದರು. ಜವಳಿ ವರ್ತಕರ ಸಂಘದ ಕಾರ್ಯದರ್ಶಿ ರಾಕೇಶ ಕಠಾರಿಯಾ ಮಾತನಾಡಿ, ವಿದ್ಯುತ್‌ ದರ ಏರಿಕೆಯಿಂದ ಕಂಪನಿಗಳು ರಾಜ್ಯವನ್ನು ಬಿಟ್ಟು ಹೋಗುವ ಸ್ಥಿತಿ ಎದುರಾಗಿದೆ. ಸರ್ಕಾರ ಮಧ್ಯಪ್ರವೇಶಿಸಿ ಕ್ಯಾಬಿನೆಟ್​ನಲ್ಲಿ ಸೂಕ್ತ ತೀರ್ಮಾನ ತೆಗೆದುಕೊಂಡು ಹಳೆ ದರವನ್ನು ಮುಂದುವರೆಸಬೇಕು ಎಂದು ಒತ್ತಾಯಿಸಿದರು.

ಧಾರವಾಡದಲ್ಲಿ ಉತ್ತಮ ಬೆಂಬಲ: ವಿದ್ಯುತ್ ದರ ಏರಿಕೆ ಖಂಡಿಸಿ ಬಂದ್ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಬೆಳಿಗ್ಗೆಯಿಂದ ವ್ಯಾಪಾರಿಗಳು ತಮ್ಮ‌ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದರು. ಧಾರವಾಡ ಕೆಸಿಸಿ ಬ್ಯಾಂಕ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ಆಗಮಿಸಿದ ವರ್ತಕರು, ವ್ಯಾಪಾರಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಡಿಸಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

''ಇಂದಿನ ಬಂದ್ ಬಹುತೇಕ ಯಶಸ್ವಿಯಾಗಿದೆ. ಹುಬ್ಬಳ್ಳಿ, ಧಾರವಾಡದ 40ಕ್ಕೂ ಹೆಚ್ಚು ಸಂಘಟನೆಗಳು ಬಂದ್​ಗೆ ಬೆಂಬಲ ನೀಡಿವೆ. ರಾಜ್ಯಾದ್ಯಂತ 25ಕ್ಕೂ ಹೆಚ್ಚು ಜಿಲ್ಲಾ ಸಂಘಟನೆಗಳು ಬೆಂಬಲ ನೀಡಿವೆ. ಮಂಡ್ಯದಿಂದ ಕಲಬುರಗಿವರೆಗೆ ಸ್ವಯಂ ಪ್ರೇರಿತ ಬಂದ್​ಗೆ ಬೆಂಬಲ ಲಭಿಸಿದೆ. ಈಗಿನ ವಿದ್ಯುತ್ ದರ ಹೆಚ್ಚಳವನ್ನು ಹಿಂತೆಗೆದುಕೊಳ್ಳಬೇಕು. ಸರ್ಕಾರ ಶೀಘ್ರವೇ ವಾಣಿಜ್ಯೋದ್ಯಮ ಸಂಸ್ಥೆಗಳ ಜೊತೆ ಸಭೆ ಮಾಡಬೇಕು. ಸಭೆಗೆ ಉತ್ತರ ಕರ್ನಾಟಕ ಭಾಗದ ಸಂಘದವರನ್ನು ಪರಿಗಣಿಸಬೇಕು'' ಎಂದು ವಿನಯ್​ ಜವಳಿ ಆಗ್ರಹಿಸಿದರು.

ಹಾವೇರಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ: ವಿದ್ಯುತ್ ದರ ಏರಿಕೆ ವಿರೋಧಿಸಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಹಾವೇರಿ ಜಿಲ್ಲೆಯಲ್ಲಿ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವು ಅಂಗಡಿ, ಮುಂಗಟ್ಟುಗಳನ್ನು ಬಂದ್​ ಮಾಡಲಾಯಿತು. ಇನ್ನೂ ಕೆಲವರು ಎಂದಿನಂತೆ ವ್ಯಾಪಾರ ವಹಿವಾಟಿನಲ್ಲಿ ನಿರತರಾಗಿದ್ದರು. ಬಂದ್ ಬೆಂಬಲಿಸಿ ಹಾವೇರಿ ವಾಣಿಜ್ಯೋದ್ಯಮ ಸಂಸ್ಥೆ ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು, ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ವಿಜಯನಗರದಲ್ಲಿ ಅಂಗಡಿ, ಮುಂಗಟ್ಟುಗಳು ಬಂದ್​: ವಿದ್ಯುತ್ ಶುಲ್ಕ ದರ ಏರಿಕೆ ಖಂಡಿಸಿ ಕರ್ನಾಟಕ ವಾಣಿಜ್ಯ ಕೈಗಾರಿಕೋದ್ಯಮ ಸಂಘದಿಂದ ಕರೆ ನೀಡಿದ್ದ ಬಂದ್‌ಗೆ ಬೆಂಬಲಿಸಿ ಗುರುವಾರ ನಗರದಲ್ಲಿ ಎಲ್ಲಾ ಅಂಗಡಿ, ಮುಂಗಟ್ಟುಗಳನ್ನು ಬಂದ್​ ಮಾಡಿ ಪ್ರತಿಭಟನೆ ನಡೆಸಲಾಯಿತು.

ಔಷಧ ಸೇರಿದಂತೆ ಅವಶ್ಯಕ ಸಾಮಗ್ರಿಗಳ ಅಂಗಡಿಗಳು ಹೊರತುಪಡಿಸಿ, ವಿವಿಧ ವರ್ತಕರ ಸಂಘ ಸೇರಿದಂತೆ ಇತರೆ ಸಂಘಟನೆಯಿಂದ ನಗರದ ವಡಕರಾಯ ದೇಗುಲದಿಂದ ಮೇನ್‌ಬಜಾರ್, ಗಾಂಧಿ ಚೌಕ್, ಕೇಮದ್ರ ಬಸ್‌ ನಿಲ್ದಾಣ, ಡಾ.ಪುನೀತ್‌ರಾಜ್‌ಕುಮಾರ್ ವೃತ್ತ, ಮದಕರಿ ವೃತ್ತ, ವಾಲ್ಮೀಕಿ ವೃತ್ತ, ಎಪಿಎಂಸಿ ಮಾರ್ಗವಾಗಿ ಸಾಯಿಬಾಬಾ ವೃತ್ತದವರೆಗೆ ಬೈಕ್ ರ‍್ಯಾಲಿ ನಡೆಯಿತು. ವರ್ತಕರು ಸೇರಿದಂತೆ ಇತರೆ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿವರೆಗೆ ಕಾಲ್ನಡಿಗೆ ಜಾಥಾ ನಡೆಸಿದರು. ಬಳಿಕ ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಜಿಲ್ಲಾ ವಾಣಿಜ್ಯ ಕೈಗಾರಿಕೋದ್ಯಮ ಸಂಘದ ಅಧ್ಯಕ್ಷ ಅಶ್ವಿನ್ ಕೊತ್ತೊಂಬರಿ, ಉಪಾಧ್ಯಕ್ಷ ಸೈಯದ್ ನಾಜಿಮುದ್ದೀನ್, ಕಾರ್ಯದರ್ಶಿ ಕಾಕುಬಾಳ್ ರಾಜೇಂದ್ರ, ಜಂಟಿ ಕಾರ್ಯದರ್ಶಿ ಪ್ರಹ್ಲಾದ್ ಭೂಪಾಳ್, ಪದಾಧಿಕಾರಿಗಳಾದ ವಿಜಯ ಸಿಂದಗಿ, ಚಂದ್ರಕಾಂತ್ ಕಾಮತ್, ಮದುಕರ್ ರಾವ್, ಮಹೇಂದ್ರ ಜೈನ್, ರಮೇಶ್ ಗುಪ್ತ, ಪಿ.ಎನ್. ಶ್ರೀಪಾದ್ ಇತರರಿದ್ದರು.

ಇದನ್ನೂ ಓದಿ: Price hike: ಅಗತ್ಯ ವಸ್ತುಗಳ ಬೆಲೆ ಏರಿಕೆ.. ತಿಂಡಿ ತಿನಿಸುಗಳ ದರ ಹೆಚ್ಚಳ ಅನಿವಾರ್ಯ: ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.