ಹುಬ್ಬಳ್ಳಿ: ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ಕೊರೊನಾ ವಾರಿಯರ್ಸ್ಗಳನ್ನು ಹುಬ್ಬಳ್ಳಿ ಶ್ರೀರಾಮ ಸೇನೆ ಕಾರ್ಯಕರ್ತರು ಅಭಿನಂದಿಸಿದರು.
ಲಾಕ್ಡೌನ್ ಹಿನ್ನೆಲೆಯಲ್ಲಿ ತಮ್ಮ ಪ್ರಾಣವನ್ನು ಪಣಕ್ಕೆ ಇಟ್ಟು ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಪೊಲೀಸರು ಹಾಗೂ ಪೌರಕಾರ್ಮಿಕರಿಗೆ ಶ್ರೀರಾಮ ಸೇನೆ ವತಿಯಿಂದ ಉಪಹಾರ ಕೂಟ ಏರ್ಪಡಿಸಲಾಗಿತ್ತು.
ಹಳೇ ಹುಬ್ಬಳ್ಳಿ ಪೋಲೀಸ್ ಸ್ಟೇಷನ್ನಲ್ಲಿನ ಅಧಿಕಾರಿಗಳಿಗೆ ಹಾಗೂ ಪೌರಕಾರ್ಮಿಕರಿಗೆ ಉಪಹಾರ ವಿತರಿಸುವ ಜೊತೆಗೆ ಪೊಲೀಸ್ ಸಿಬ್ಬಂದಿ ಹಾಗೂ ಪೌರಕಾರ್ಮಿಕರಿಗೆ ಗುಲಾಬಿ ಹೂ ನೀಡಿ ಅಭಿನಂದಿದಲಾಯಿತು. ಈ ಸಂದರ್ಭದಲ್ಲಿ ಹುಬ್ಬಳ್ಳಿಯ ಶ್ರೀರಾಮ ಸೇನೆ ಕಾರ್ಯಕರ್ತರು ಉಪಸ್ಥಿತರಿದ್ದರು.