ETV Bharat / state

ಮಾಜಿ ಸಚಿವ ವಿನಯ್​ ಕುಲಕರ್ಣಿ ಅನುಪಸ್ಥಿತಿಯಲ್ಲೂ ಬರ್ತ್‌ಡೇ ಆಚರಿಸಲಿರುವ ಕಾಂಗ್ರೆಸ್ ಕಾರ್ಯಕರ್ತರು - ವಿನಯ್​ ಕುಲಕರ್ಣಿ ಹುಟ್ಟುಹಬ್ಬ

ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಶಿವಗಿರಿಯಲ್ಲಿರುವ ನಿವಾಸ ಜನರಿಲ್ಲದೇ ಬಿಕೋ‌ ಎನ್ನುತ್ತಿದೆ. ವಿನಯ ಕುಲಕರ್ಣಿ ಪ್ರತಿ ವರ್ಷ ಅದ್ದೂರಿಯಿಂದ ಜನ್ಮದಿನ ಆಚರಿಸಿಕೊಳ್ಳುತ್ತಿದ್ದರು. ಇದೀಗ ಯೋಗೇಶ್​ ಗೌಡ ಗೌಡರ ಹತ್ಯೆ ಪ್ರಕರಣದಡಿ ಸಿಬಿಐ ವಶದಲ್ಲಿದ್ದಾರೆ..

Dharwad
ವಿನಯ್​ ಅನುಪಸ್ಥಿತಿಯಲ್ಲಿ ಬರ್ತಡೇ ಆಚರಣೆ ಮಾಡಲಿರುವ ಕಾಂಗ್ರೆಸ್ ಕಾರ್ಯಕರ್ತರು
author img

By

Published : Nov 7, 2020, 9:30 AM IST

Updated : Nov 7, 2020, 10:28 AM IST

ಧಾರವಾಡ : ಯೋಗೇಶ್​ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್​ ಕುಲಕರ್ಣಿ ಸಿಬಿಐ ವಶದಲ್ಲಿದ್ದಾರೆ. ವಿನಯ್ ಕುಲಕರ್ಣಿ ಅವರು ಇಂದು 52ನೇ ವಸಂತಕ್ಕೆ ಕಾಲಿಡಲಿದ್ದಾರೆ. ಹೀಗಾಗಿ, ಅವರ ಅನುಪಸ್ಥಿತಿಯಲ್ಲಿ ಅವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಇಂದು ಜನ್ಮದಿನ ಆಚರಣೆ ಮಾಡಲಿದ್ದಾರೆ.

ಮಾಜಿ ಸಚಿವ ವಿನಯ್ ಕುಲಕರ್ಣಿ ಜನ್ಮದಿನ: ಧಾರವಾಡ ಉಪನಗರ ಪೊಲೀಸ್ ಠಾಣೆಗೆ ಬ್ಯಾರಿಕೇಡ್ ಅಳವಡಿಸಿ ಭದ್ರತೆ

ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಶಿವಗಿರಿಯಲ್ಲಿರುವ ನಿವಾಸ ಜನರಿಲ್ಲದೇ ಬಿಕೋ‌ ಎನ್ನುತ್ತಿದೆ. ವಿನಯ ಕುಲಕರ್ಣಿ ಪ್ರತಿ ವರ್ಷ ಅದ್ದೂರಿಯಿಂದ ಜನ್ಮದಿನ ಆಚರಿಸಿಕೊಳ್ಳುತ್ತಿದ್ದರು. ಇದೀಗ ಯೋಗೇಶ್​ ಗೌಡ ಗೌಡರ ಹತ್ಯೆ ಪ್ರಕರಣದಡಿ ಸಿಬಿಐ ವಶದಲ್ಲಿದ್ದಾರೆ.

ಸಾವಿರಾರು ಸಂಖ್ಯೆಯಲ್ಲಿ ಸೇರಿ ಸಂಭ್ರಮಿಸುತ್ತಿದ್ದ ಅಭಿಮಾನಿಗಳಿಗೆ ಇದರಿಂದ ನಿರಾಸೆ ಉಂಟಾಗಿದೆ. ಆದರೆ, ಅವರ ಅನುಪಸ್ಥಿತಿಯಲ್ಲಿಯೂ ಕಾಂಗ್ರೆಸ್​ ಕಾರ್ಯಕರ್ತರು ಬರ್ತ್‌ಡೇ ಆಚರಿಸಲಿದ್ದಾರೆ. ಈ ಹಿನ್ನೆಲೆ ಧಾರವಾಡ ಉಪನಗರ ಪೊಲೀಸ್ ಠಾಣೆಗೆ ಬ್ಯಾರಿಕೇಡ್ ಅಳವಡಿಸಿ ಭದ್ರತೆ ಒದಗಿಸಲಾಗಿದೆ.

ಸಿಬಿಐ ವಶದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ವಿಚಾರಣೆಗಾಗಿ ಹುಬ್ಬಳ್ಳಿಗೆ ಕರೆ ತರಲಾಗಿದೆ. ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಸಿಎಆರ್ ಮೈದಾನದಲ್ಲಿನ ಕೊಠಡಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಈ ಹಿನ್ನೆಲೆ ಮೈದಾನದ ಸುತ್ತ ಬಿಗಿ ಪೊಲೀಸ್​ ಬಂದೋಬಸ್ತ್ ನಿಯೋಜಿಸಲಾಗಿದೆ.

ಹಣ್ಣು-ಹಂಪಲು ವಿತರಣೆ: ಧಾರವಾಡದ ಕಾಂಗ್ರೆಸ್ ಕಾರ್ಯಕರ್ತರು ವಿನಯ್​ ಕುಲಕರ್ಣಿ ಅವರ ಜನ್ಮದಿನದ ‌ಅಂಗವಾಗಿ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿದ್ದಾರೆ. ಅಪಾರ ಅಭಿಮಾನಿಗಳು ಹಾಗೂ ಕಾರ್ಯಕರ್ತರನ್ನು ಹೊಂದಿರುವ ಮಾಜಿ ಸಚಿವ ವಿನಯ್​ ಕುಲಕರ್ಣಿ ಅವರಿಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಅಭಿಮಾನಿಗಳಿಂದ ಹಾಗೂ ಕಾರ್ಯಕರ್ತರಿಂದ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

Last Updated : Nov 7, 2020, 10:28 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.