ETV Bharat / state

ಬಿಜೆಪಿ ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿ.. ಕಾಂಗ್ರೆಸ್ ಕಾರ್ಯಕರ್ತರ ಆಗ್ರಹ - congress protest in dharwad

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಜಿಲ್ಲಾಧಿಕಾರಿ ದೀಪಾ ಚೋಳನ್​ ಅವರ ಮೂಲಕ ಮನವಿ ಸಲ್ಲಿಸಿದರು.

protest in dharwad
ಕಾಂಗ್ರೆಸ್ ಕಾರ್ಯಕರ್ತರ ಅಗ್ರಹ
author img

By

Published : Jun 24, 2020, 3:54 PM IST

ಧಾರವಾಡ : ದೇಶದ ವಿವಿಧ ರಾಜ್ಯಗಳು ಕೊರೊನಾ ನಿಯಂತ್ರಣ ಮಾಡುವಲ್ಲಿ ಸಫಲವಾಗಿವೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಷ್ಟ್ರಪತಿಗಳು ಕೂಡಲೇ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಮಹಾನಗರ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಜಿಲ್ಲಾಧಿಕಾರಿ ದೀಪಾ ಚೋಳನ್​ ಅವರ ಮೂಲಕ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಸೋಂಕು ನಿಯಂತ್ರಣದಲ್ಲಿ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ. ಆಟೋ ಚಾಲಕರಿಗೆ ಇನ್ನೂ ಪರಿಹಾರ ಧನ ಸಿಕ್ಕಿಲ್ಲ. ಬಡವರಿಗೆ ಸರ್ಕಾರ ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡುವಲ್ಲಿ ವಿಫಲಗೊಂಡಿದೆ ಎಂದು ದೂರಿದರು.

ಈ ರೀತಿ ಶೂನ್ಯ ಸಾಧನೆ ಮಾಡಿರುವ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ತರಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.