ಹುಬ್ಬಳ್ಳಿ: ನಗರದ ಕಿಮ್ಸ್ ಗೇಟ್ ಬಳಿ ಇರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆ ದುರಸ್ತಿ ಮಾಡುವಂತೆ ಆಗ್ರಹಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ವ್ಯಾಪ್ತಿಯ ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಸದಸ್ಯರು ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಿದರು.
ಮಹಾನಗರ ಪಾಲಿಕೆಯು ಗಾಂಧಿ ಪ್ರತಿಮೆಯನ್ನು ದುರಸ್ತಿ ಮಾಡದೆ ನಿರ್ಲಕ್ಷ್ಯ ತೋರುತ್ತಿದೆ. ಕೂಡಲೇ ಗಾಂಧೀಜಿ ಪುತ್ಥಳಿ ದುರಸ್ತಿ ಮಾಡುವಂತೆ ಒತ್ತಾಯಿಸಿದರು.
ಈ ವೇಳೆ ಮಾಜಿ ಶಾಸಕರು, ಮಾಜಿ ಸಂಸದರು, ಕೆಪಿಸಿಸಿ ಮಾಜಿ ಪದಾಧಿಕಾರಿಗಳು, ಕೆಪಿಸಿಸಿ ಸಂಯೋಜಕರು, ಬ್ಲಾಕ್ ಅಧ್ಯಕ್ಷರು, ಮಹಾನಗರ ಜಿಲ್ಲಾ ಕಾಂಗ್ರೆಸ್ ಹಾಗೂ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಪಾಲಿಕೆಯ ಮಾಜಿ ಸದಸ್ಯರು ಪಾಲ್ಗೊಂಡಿದ್ದರು.