ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಠಾಣೆಯ ಎದುರು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ.
ಸಹೋದರ ವಿಜಯ್ ಕುಲಕರ್ಣಿ ಅವರನ್ನು ಸಹ ಜನ್ಮದಿನಕ್ಕೂ ಮೊದಲು ವಿಚಾರಣೆ ನಡೆಸಿದ್ದರು. ಅದೇ ರೀತಿ ಮಾಜಿ ಸಚಿವರನ್ನು ಸಹ ಜನ್ಮ ದಿನಕ್ಕೆ ಎರಡು ದಿನ ಮುಂಚೆ ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೂ 2019ರ ಸಪ್ಟೆಂಬರ್ 7 ರಂದು ರಾಜ್ಯ ಸರ್ಕಾರ ಸಿಬಿಐ ವಿಚಾರಣೆಗೆ ಶಿಫಾರಸು ಮಾಡಿತ್ತು. ಅದೇ ತಿಂಗಳು 28ರಿಂದ ಸಿಬಿಐ ಅಧಿಕಾರಿಗಳು ವಿಚಾರಣೆ ಆರಂಭಿಸಿದ್ದರು. 2019ರ ಸಪ್ಟೆಂಬರ್ 28 ರಂದು ಮೃತ ಯೋಗೇಶಗೌಡ ಸಹೋದರ ಗುರುನಾಥ ಗೌಡ ಅವರ ಮನೆಗೆ ಭೇಟಿ ನೀಡಿ ವಿಚಾರಣೆ ಆರಂಭಿಸಿದ್ದರು.
ಯೋಗೇಶ್ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ!
ಸದ್ಯ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದ ಹಿನ್ನೆಲೆ ಧಾರವಾಡ ಉಪನಗರ ಪೊಲೀಸ್ ಠಾಣೆಯ ಎದುರು ನಾಯಕರು ಹಾಗೂ ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ.