ETV Bharat / state

40 ಪರ್ಸೆಂಟ್ ಕಮಿಷನ್ ವಿರುದ್ಧ ಕಾಂಗ್ರೆಸ್ ಮುಖಂಡರ ಪ್ರತಿಭಟನೆ: ಹುಬ್ಬಳ್ಳಿ ಬಿಜೆಪಿ ಕಚೇರಿ ಎದುರು ಹೈಡ್ರಾಮಾ - ಕಾಂಗ್ರೆಸ್ ನಾಯಕ ರಜತ್ ಉಳ್ಳಾಗಡ್ಡಿಮಠ

ಸರ್ಕಾರದ 40 ಪರ್ಸೆಂಟ್ ಕಮಿಷನ್​​ ವಿರುದ್ಧ ಪ್ರತಿಭಟನೆ ನಡೆಸುವವರ ಮೇಲೆ ಬಿಜೆಪಿ ಕಾರ್ಯಕರ್ತರ ಬಲಪ್ರಯೋಗ - ಕಾಂಗ್ರೆಸ್ ನಾಯಕ ರಜತ್ ಉಳ್ಳಾಗಡ್ಡಿಮಠ ಖಂಡನೆ.

Congress leaders protest
ಕಾಂಗ್ರೆಸ್ ಮುಖಂಡರ ಪ್ರತಿಭಟನೆ
author img

By

Published : Oct 31, 2022, 1:53 PM IST

Updated : Oct 31, 2022, 2:09 PM IST

ಹುಬ್ಬಳ್ಳಿ: ಬಿಜೆಪಿ ಸರ್ಕಾರದ 40 ಪರ್ಸೆಂಟ್ ಕಮಿಷನ್ ವಿರುದ್ಧ ಕಾಂಗ್ರೆಸ್ ಮುಖಂಡರ ಪ್ರತಿಭಟನೆ ವೇಳೆ ಹೈಡ್ರಾಮಾ ನಡೆಯಿತು. ಹುಬ್ಬಳ್ಳಿಯ ದೇಶಪಾಂಡೆ ನಗರದ ಬಿಜೆಪಿ ಕಚೇರಿಯಲ್ಲಿ ಸಹಸ್ರಾರ್ಜುನ ಜಯಂತಿ ಆಚರಣೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭಾಗಿಯಾಗಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಗದೀಶ್ ಶೆಟ್ಟರ್ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು‌.

40 ಪರ್ಸೆಂಟ್ ಕಮಿಷನ್ ವಿರುದ್ಧ ಕಾಂಗ್ರೆಸ್ ಮುಖಂಡರ ಪ್ರತಿಭಟನೆ...

ಆಗ ಬಿಜೆಪಿ ಕಾರ್ಯಕರು ಪ್ರತಿಭಟನಾನಿರತ ವಿರುದ್ಧ ಘೋಷಣೆ ಕೂಗುತ್ತಾ ಕಾಂಗ್ರೆಸ್ ಕಾರ್ಯಕರ್ತರ ಕೈಯಲ್ಲಿನ 40 ಪರ್ಸೆಂಟ್ ಕಮಿಷನ್ ಪೋಸ್ಟರ್ ಕಿತ್ತುಕೊಂಡು ಹರಿದು ಹಾಕಿದರು. ಈ ವೇಳೆ, ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನೂಕಾಟ - ತಳ್ಳಾಟ ನಡೆದಿದೆ. ಪ್ರತಿಭಟನೆ ವೇಳೆ ನುಗ್ಗಿ ಕೇಸರಿ ಶಾಲು ಹಾರಾಡಿಸಿದ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗಿದರು. ಮಧ್ಯ ಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಕರೆದುಕೊಂಡು ಹೋದರು.‌

Congress leaders protest
ಕಾಂಗ್ರೆಸ್ ಮುಖಂಡರ ಪ್ರತಿಭಟನೆ

ಸರ್ಕಾರದ 40 ಪರ್ಸೆಂಟ್ ಕಮಿಷನ್​​ ವಿರುದ್ಧ ಪ್ರತಿಭಟನೆ ನಡೆಸುವವರ ಮೇಲೆ ಬಿಜೆಪಿ ಕಾರ್ಯಕರ್ತರು ಬಲಪ್ರಯೋಗ ಮಾಡಿದ್ದನ್ನು ಕಾಂಗ್ರೆಸ್ ನಾಯಕ ರಜತ್ ಉಳ್ಳಾಗಡ್ಡಿಮಠ ಖಂಡಿಸಿದರು. ಬಿಜೆಪಿ ಕಾರ್ಯಕರ್ತರು ಭ್ರಷ್ಟಾಚಾರದ ಪ್ಲೆಕಾರ್ಡ್ ಹರಿದು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಗುತ್ತಿಗೆದಾರರ ಸಾವಿಗೆ ಇವರು ಖುಷಿಪಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಇನ್ಸ್​ಪೆಕ್ಟರ್​ ನಂದೀಶ್ ಸಾವಿನ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

Last Updated : Oct 31, 2022, 2:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.