ಹುಬ್ಬಳ್ಳಿ: ರಾಜ್ಯದಲ್ಲಿ ದಿನದಿಂದ ಅತಿ ಹೆಚ್ಚು ಕೋವಿಡ್ ಪ್ರಕರಣ ಕಾಣಿಸಿಕೊಳ್ಳುತ್ತಿದ್ದು, ಇದೀಗ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇದಕ್ಕೆ ಸಂಬಂಧಿಸಿದಂತೆ ವಾಟ್ಸ್ಆ್ಯಪ್ ಹಾಗೂ ಫೇಸ್ಬುಕ್ನಲ್ಲಿ ಮಾಹಿತಿ ನೀಡಿರುವ ಅವರು, ನನ್ನ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಲ್ಲಿ ಸತತವಾಗಿ ತೊಡಗಿಕೊಂಡಿರುವುದು ಹಾಗೂ ಕೊರೊನಾ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರಿಂದ ಸ್ವಯಂ ಪ್ರೇರಿತನಾಗಿ ಗುರುವಾರದಂದು ಹುಬ್ಬಳ್ಳಿ ಕಿಮ್ಸ್ನಲ್ಲಿ ಕೋವಿಡ್-19 ಪರೀಕ್ಷೆಗೊಳಗಾಗಿದ್ದು, ಶುಕ್ರವಾರ "ಕೊರೋನಾ ಪಾಸಿಟಿವ್" ಎಂದು ಫಲಿತಾಂಶ ಬಂದಿದ್ದಾಗಿ ತಿಳಿಸಿದ್ದಾರೆ.
- " class="align-text-top noRightClick twitterSection" data="">
ವೈದ್ಯರ ಸಲಹೆ ಮೇರೆಗೆ ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಕ್ವಾರಂಟೈನ್ಗೊಳಗಾಗಿದ್ದೇನೆ. ರೋಗ ನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದ್ದು, ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಸದಾ ಇರುವುದರಿಂದ ಶೀಘ್ರ ಗುಣಮುಖನಾಗಿ ಮತ್ತೆ ಕ್ಷೇತ್ರದ ಹಾಗೂ ಜನರ ಸೇವೆಗೆ ಹಿಂದಿರುಗುತ್ತೇನೆ ಎಂದಿದ್ದಾರೆ.
ಈಗಾಗಲೇ ನನ್ನನ್ನು ಭೇಟಿಯಾದ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದ ವ್ಯಕ್ತಿಗಳ ವಿವರವನ್ನು ಸರ್ಕಾರಿ ಅಧಿಕಾರಿಗಳಿಗೆ ನೀಡಿದ್ದೇನೆ. ಮುಂಜಾಗ್ರತಾ ಕ್ರಮವಾಗಿ ನನ್ನ ಕುಟುಂಬದ ಎಲ್ಲಾ ಸದಸ್ಯರಿಗೂ ಇಂದು ಕೊರೊನಾ ಪರೀಕ್ಷೆ ಮಾಡಿಸಿದ್ದೇನೆ. ಅಲ್ಲದೇ ತಮ್ಮನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೊರೊನಾ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳುವಂತೆ ವಿನಂತಿಸಿದ್ದಾರೆ.