ಧಾರವಾಡ: ವಿಧಾನಸಭೆ ಚುನಾವಣೆ ಹಿನ್ನೆಲೆ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಅವರು ಚುನಾವಣೆಗೆ ಸ್ಪರ್ಧೆ ಮಾಡಬೇಕು ಎನ್ನುವ ಅಭ್ಯರ್ಥಿಗಳಿಗಾಗಿ ಅರ್ಜಿ ಕರೆಯಲಾಗಿದ್ದು. ಅಭ್ಯರ್ಥಿಗಳು ನ.15ರೊಳಗಾಗಿ ಅರ್ಜಿ ಭರ್ತಿ ಮಾಡಿಕೊಡಬೇಕು ಎಂದು ಹೇಳಿದರು.
ಈಗಾಗಲೇ ಮೂರು ಹಂತದಲ್ಲಿ ನಾವು ಸರ್ವೇ ಮಾಡಿದ್ದು, 130 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುಂದೆ ಇದೆ, ಡಿಸೆಂಬರ್ ಒಳಗಾಗಿ 150 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮ ಮಾಡಬೇಕಾಗಿರುವುದರಿಂದ ಕಾರ್ಯ ಆರಂಭವಾಗಿದೆ. ಈ ಭಾರಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಚುನಾವಣೆ ಎದುರಿಸಲಿದೆ ಎಂದು ತಿಳಿಸಿದರು.
ಭಾರತ ಜೋಡೋದಿಂದ ರಾಜ್ಯ ಹಾಗೂ ದೇಶದಲ್ಲಿ ಹೊಸ ಸಂಚಲನ ಉಂಟಾಗಿದ್ದು, ಕಾಂಗ್ರೆಸ್ ಪಕ್ಷ ಜೋಡೋ ಕಾರ್ಯಕ್ರಮ ಮಾಡುತ್ತಿದ್ದರೆ ಬಿಜೆಪಿ ತೋಡೋ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಚುನಾವಣೆ ಸಮೀಪ ಬಂದಾಗ ಬಿಜೆಪಿಯವರಿಗೆ ಜ್ಞಾನೋದಯವಾಗಿ ಜನ ಸಂಕಲ್ಪ ಯಾತ್ರೆ ಮಾಡುತ್ತಿದೆ. ಇದು ಹಣ ಸಂಗ್ರಹ ಯಾತ್ರೆ ಅಷ್ಟೇ. ರಾಜ್ಯದಲ್ಲಿರುವುದು ಗುಂಡಿಗಳ ಸರ್ಕಾರ ಮತ್ತು ಶೇ.40 ಕಮೀಷನ್ ಸರ್ಕಾರ ಎಂದು ರಾಜ್ಯ ಸರ್ಕಾರ ವಿರುದ್ದ ಸಲೀಂ ಅಹಮದ್ ಹೇಳಿದ್ರು.
ಇದನ್ನೂ ಓದಿ:ಬಳ್ಳಾರಿಯಲ್ಲಿ ಮನೆ ಮನೆಗೆ ತೆರಳಿ ಕುಕ್ಕರ್ ಹಂಚಿದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ