ಧಾರವಾಡ: ರೈತರ ಸಮಸ್ಯೆ ಹಾಗೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಹಾಗೂ ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ವಿನೂತನವಾಗಿ ಎತ್ತಿನ ಬಂಡಿ ಪ್ರತಿಭಟನೆ ನಡೆಸಲಾಗಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಗಾಂಧಿ ನಗರದ ವೃತ್ತದಿಂದ ನವಲೂರ ಸೇತುವೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ನಿರಂತರ ಮಳೆಯಿಂದ ರೈತರ ಬೆಳೆ ಹಾನಿಯಾಗಿದೆ. ಬೆಳೆಹಾನಿಗೆ ಸೂಕ್ತ ಪರಿಹಾರ ನೀಡಬೇಕು. ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಬೇಕು.
ಕೊರೊನಾ ಸಮಯದಲ್ಲಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ. ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾಳಾದ ಬೆಳೆಗಳಿಗೆ ಸೂಕ್ತ ಪರಿಹಾರ ನೀಡಬೇಕು. ಕಾಳಜಿ ಕೇಂದ್ರಗಳನ್ನು ತೆರೆದು ಸಂಕಷ್ಟದಲ್ಲಿರುವವರಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.