ಧಾರವಾಡ: ತೈಲ ಬೆಲೆ ಹೆಚ್ಚಳ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸೈಕಲ್ ನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಗರದ ಕೋರ್ಟ್ ವೃತ್ತದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ನಗರದ ವಿವಿಧ ವೃತ್ತಗಳಿಂದ ಜಿಲ್ಲಾಧಿಕಾರಿ ಕಚೇರಿ ತಲುಪಿದರು. ನಂತರ ಜಿಲ್ಲಾಧಿಕಾರಿ ಕಚೇರಿ ಎದರು ಎಮ್ಮೆ ತಂದು ವಿನೂತನವಾಗಿ ಪ್ರತಿಭಟಿಸಿದರು. ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಮೆರವಣಿಗೆ ಉದ್ದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಸರ್ಕಾರ ದಿನೇ ದಿನೆ ತೈಲ ಬೆಲೆ ಏರಿಕೆ ಮಾಡುತ್ತಿದೆ. ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಬೇಕು. ಇಂಧನ ಬೆಲೆ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು