ETV Bharat / state

ಬಸ್ ಹರಿದು ಕಾಂಗ್ರೆಸ್ ಕಾರ್ಯಕರ್ತ ಸಾವು: ಹುಬ್ಬಳ್ಳಿ ಸಮಾವೇಶಕ್ಕೆ ಬಂದಾಗ ಘಟನೆ - ಈಟಿವಿ ಭಾರತ ಕನ್ನಡ

ಹುಬ್ಬಳ್ಳಿಯಲ್ಲಿ ಮಹದಾಯಿ ಜಲ ಜನ ಆಂದೋಲನ - ಕಾರ್ಯಕ್ರಮಕ್ಕೆ ಆಗಮಿಸಿದ್ದ ವ್ಯಕ್ತಿ ಬಸ್​ ಹರಿದು ಸಾವು - ಕೊಪ್ಪಿಕರ್ ರಸ್ತೆ ಬಳಿ ಘಟನೆ

congress-worker-died-in-bus-accident-congress-mahadayi-jala-jana-andolana
ಬಸ್ ಹರಿದು ಕಾಂಗ್ರೆಸ್ ಕಾರ್ಯಕರ್ತ ಸಾವು: ಸಮಾವೇಶಕ್ಕೆ ಬಂದು ಜೀವ ಕಳೆದುಕೊಂಡ ವ್ಯಕ್ತಿ
author img

By

Published : Jan 2, 2023, 7:07 PM IST

Updated : Jan 2, 2023, 9:15 PM IST

ಹುಬ್ಬಳ್ಳಿ : ಕಾಂಗ್ರೆಸ್ ಪಕ್ಷದ ಮಹದಾಯಿ ಜಲ ಜನ ಆಂದೋಲನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕಾರ್ಯಕರ್ತನ ಮೇಲೆ ಬಸ್ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಕೊಪ್ಪಿಕರ್ ರಸ್ತೆಯ ಬಳಿ ನಡೆದಿದೆ.

ರಸ್ತೆ ಪಕ್ಕದಲ್ಲಿ ನಿಂತಿದ್ದ ಪಾದಚಾರಿಗಳ ಮೇಲೆ ಬಸ್ ಹರಿದು ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಬಸ್ ಚಾಲಕ ಪರಾರಿಯಾಗಿದ್ದು, ಬಳಿಕ ಸ್ಥಳಕ್ಕೆ ಆಗಮಿಸಿದ ಸಂಚಾರಿ ಪೊಲೀಸರು ಶವವನ್ನು ತೆರವುಗೊಳಿಸಿದ್ದಾರೆ.

ನಗರದ ನೆಹರೂ ಮೈದಾನದಲ್ಲಿ ಕಾಂಗ್ರೆಸ್​ನಿಂದ ಮಹದಾಯಿ ಯೋಜನೆಗೆ ಆಗ್ರಹಿಸಿ 'ಮಹದಾಯಿ ಜಲ ಜನ ಆಂದೋಲನ' ಆಯೋಜಿಸಲಾಗಿತ್ತು. ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ಧರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್​ ಸಿಂಗ್ ಸುರ್ಜೇವಾಲಾ ಇತರರು ಭಾಗವಹಿಸಿದ್ದರು. ಅಲ್ಲದೆ, ಆಂದೋಲನದಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಮುಂದಿನ ಚುನಾವಣೆಗೂ ಮುಂಚೆ ಸಿದ್ದರಾಮಯ್ಯ ಜೈಲಿಗೆ ಹೋಗಲಿದ್ದಾರೆ: ನಳಿನ್​ ಕುಮಾರ್​ ಕಟೀಲ್

Last Updated : Jan 2, 2023, 9:15 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.