ETV Bharat / state

ಸೇವಾ ನ್ಯೂನತೆ: ಸ್ಪೈಸ್‍ಜೆಟ್‌ಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಿಂದ ದಂಡ

ಗ್ರಾಹಕರಿಗೆ ಸೇವಾ ನ್ಯೂನತೆ ಎಸಗಿದ ಸ್ಪೈಸ್‍ಜೆಟ್ ಏರ್​ಲೈನ್​ಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ದಂಡ ಹಾಕಿದೆ.

consumer-commission-fined-spicejet-airlines
ಸ್ಪೈಸ್‍ಜೆಟ್ ಕಂಪನಿಗೆ ದಂಡ
author img

By

Published : Feb 3, 2023, 8:41 PM IST

ಧಾರವಾಡ: ಸೇವಾ ನ್ಯೂನತೆ ಎಸಗಿದ ಹಿನ್ನೆಲೆಯಲ್ಲಿ ಸ್ಪೈಸ್‍ಜೆಟ್ ಲಿಮಿಟೆಡ್​ ಸಂಸ್ಥೆಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ದಂಡ ಹಾಕಿದೆ. ಇಲ್ಲಿಯ ಮಾಳಾಪುರದ ಶಕೀಲ್, ಶೌಕತ್ ಅಲಿ ಮುಲ್ಲಾ ಮತ್ತು ಮಹ್ಮದ್ ಮಾವಜಾನ್‍ ಎಂಬುವವರು ದಿ.29-12-2021ರಂದು ಸ್ಪೈಸ್‍ಜೆಟ್ ಲಿಮಿಟೆಡ್ ವಿಮಾನದ ಮೂಲಕ ಹೈದರಾಬಾದ್‌ ನಿಂದ ಬೆಳಗಾವಿಗೆ ಬರಲು ಟಿಕೆಟ್ ಬುಕ್ ಮಾಡಿದ್ದರು. ವಿಮಾನ ನಿಗದಿತ ದಿನಾಂಕದಂದು ಮಧ್ಯಾಹ್ನ 1.30 ಗಂಟೆಗೆ ಅಲ್ಲಿಂದ ನಿರ್ಗಮಿಸಬೇಕಿತ್ತು. ದೂರುದಾರರು ವಿಮಾನ ಹೊರಡುವ 1 ತಾಸು 15 ನಿಮಿಷಗಳ ಮೊದಲೇ ನಿಲ್ದಾಣಕ್ಕೆ ಆಗಮಿಸಿದ್ದರು. ಅಲ್ಲಿನ ಕರ್ತವ್ಯ ನಿರತ ಸೆಕ್ಯುರಿಟಿ ದೂರುದಾರರಿಗೆ ವಿಮಾನ ನಿಲ್ದಾಣದಲ್ಲಿ ಪ್ರವೇಶಿಸಲು ನಿರಾಕರಿಸಿದ್ದರು.

ದೂರುದಾರರು ಎಷ್ಟೇ ವಿನಂತಿ ಮಾಡಿಕೊಂಡರೂ ವಿಮಾನ ನಿಲ್ದಾಣದ ಸಿಬ್ಬಂದಿ ಫಿರ್ಯಾದಿದಾರರ ವಿನಂತಿಯನ್ನು ನಿರ್ಲಕ್ಷಿಸಿದ್ದಾರೆ. ಹೀಗಾಗಿ, ಸ್ಪೈಸ್‍ಜೆಟ್‌ನವರು ಗ್ರಾಹಕರ ರಕ್ಷಣಾ ಕಾಯಿದೆ ಅಡಿ ದೂರುದಾರರಿಗೆ ಸೇವಾ ನ್ಯೂನತೆ ಎಸಗಿರುತ್ತಾರೆ ಎಂದು ದೂರು ಸಲ್ಲಿಸಿದ್ದರು. ದೂರಿನ ಬಗ್ಗೆ ಕೂಲಂಕಷ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಸದಸ್ಯ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ, ದೂರುದಾರರು ವಿಮಾನ ಹೊರಡುವ 75 ನಿಮಿಷಗಳ ಮೊದಲೇ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರೂ, ಅಲ್ಲಿನ ಕರ್ತವ್ಯ ನಿರತ ಸಿಬ್ಬಂದಿ ದೂರುದಾರರಿಗೆ ವಿಮಾನ ನಿಲ್ದಾಣದಲ್ಲಿ ಪ್ರವೇಶ ನಿರಾಕರಿಸಿರುವುದು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನತೆ ಆಗುತ್ತದೆ ಎಂದು ಆಯೋಗ ಅಭಿಪ್ರಾಯಪಟ್ಟು ತೀರ್ಪು ನೀಡಿದೆ.

ಎದುರುದಾರರು ಫಿರ್ಯಾದಿದಾರರಿಗೆ ಅವರು ಸಂದಾಯ ಮಾಡಿದ ಏರ್​ ಟಿಕೆಟ್ ಪೂರ್ತಿ ಶುಲ್ಕ ರೂ.8,457 ಮತ್ತು ಅವರು ಅನುಭವಿಸಿದ ಅನಾನುಕೂಲ, ಮಾನಸಿಕ ತೊಂದರೆ ಮತ್ತು ಹಾನಿಗಾಗಿ ರೂ.50,000 ಗಳ ಪರಿಹಾರ ಜೊತೆಗೆ ಪ್ರಕರಣದ ಖರ್ಚು ರೂ.5,000 ಗಳನ್ನು ಈ ಆದೇಶದ ದಿನಾಂಕದಿಂದ 30 ದಿನಗಳ ಒಳಗಾಗಿ ಕೊಡಬೇಕೆಂದು ಆಯೋಗ ಆದೇಶಿಸಿದೆ.

ಇದನ್ನೂ ಓದಿ: ವಾಹನದಲ್ಲಿ ಎಸಿ ಬಳಸದ ಹಿನ್ನೆಲೆ: ಪ್ರಯಾಣಿಕರಿಗೆ 15 ಸಾವಿರ ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯದ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.