ETV Bharat / state

2023 ರ ಚುನಾವಣೆಯಲ್ಲಿ ಹು-ಧಾ ಸೆಂಟ್ರಲ್​​ ಕ್ಷೇತ್ರದಿಂದಲೇ ಸ್ಪರ್ಧಿಸುವೆ: ಜಗದೀಶ್ ಶೆಟ್ಟರ್ ಸ್ಪಷ್ಟನೆ - ಈಗಾಗಲೇ ಲೋಕಾಯುಕ್ತದಲ್ಲಿ ಪ್ರಕರಣ ದಾಖಲು

ಕಳೆದ ಬಾರಿ ಚುನಾವಣೆಯಲ್ಲಿ ಕೂಡಾ ನಾನು ಸ್ಪರ್ಧೆ ಮಾಡುವುದಿಲ್ಲ ಎಂಬ ಸುದ್ದಿ ಹಬ್ಬಿತ್ತು. ಅಲ್ಲದೇ ನಾನು ರಾಜ್ಯಪಾಲರಾಗಿ ಹೋಗುತ್ತೇನೆ ಎಂಬ ಮಾತುಗಳು ಕೇಳಿ ಬಂದಿದ್ದವು. ಅದರಂತೆ ಇದೀಗ ಕೂಡಾ ಕೇಳಿ ಬಂದಿದೆ. ಆದರೆ ಈ ಯಾವ ಸುದ್ದಿಗಳು ನಿಜವಲ್ಲ. ಮುಂದಿನ ಚುನಾವಣೆಯಲ್ಲಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್​ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಖಚಿತ ಪಡಿಸಿದ್ದಾರೆ.

Jagadish Shettar
ಜಗದೀಶ್ ಶೆಟ್ಟರ್
author img

By

Published : Oct 31, 2022, 1:36 PM IST

Updated : Oct 31, 2022, 2:29 PM IST

ಹುಬ್ಬಳ್ಳಿ : ಮುಂಬರುವ 2023 ರ ಚುನಾವಣೆಯಲ್ಲಿ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವೆ. ಮತ್ತೊಬ್ಬರನ್ನು ಕಣಕ್ಕೆ ಇಳಿಸುವ ಅವಶ್ಯಕತೆ ಇಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಚುನಾವಣೆಯಲ್ಲಿ ಕೂಡಾ ನಾನು ಸ್ಪರ್ಧೆ ಮಾಡುವುದಿಲ್ಲ ಎಂಬ ಸುದ್ದಿ ಹಬ್ಬಿತ್ತು. ಅಲ್ಲದೇ ನಾನು ರಾಜ್ಯಪಾಲರಾಗಿ ಹೋಗುತ್ತೇನೆಂಬ ಮಾತುಗಳು ಕೇಳಿ ಬಂದಿದ್ದವು. ಅದರಂತೆ ಇದೀಗ ಕೂಡಾ ಮತ್ತೆ ಅಂತಹುದೇ ಊಹಾಪೋಹಗಳು ಕೇಳಿ ಬಂದಿವೆ. ಅವೆಲ್ಲ ಸುಳ್ಳು, ಮುಂಬರುವ ಚುನಾವಣೆಯಲ್ಲಿ ನಾನು ಹುಬ್ಬಳ್ಳಿ - ಧಾರವಾಡ ಸೆಂಟ್ರಲ್​ ಕ್ಷೇತ್ರದಿಂದಲೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತೇನೆ ಎಂದು ಜಗದೀಶ್​ ಶಟ್ಟರ್​ ಸ್ಪಷ್ಟಪಡಿಸಿದರು.

2023 ರ ಚುನಾವಣೆಯಲ್ಲಿ ಹ-ಧಾ ಸೆಂಟ್ರಲ್​​ ಕ್ಷೇತ್ರದಿಂದಲೇ ಸ್ಪರ್ಧಿಸುವೆ

ಈಗಾಗಲೇ ಲೋಕಾಯುಕ್ತದಲ್ಲಿ ಪ್ರಕರಣ ದಾಖಲು: ಭ್ರಷ್ಟಾಚಾರ ಕುರಿತಂತೆ ಹಿಂದೆ ಆಡಳಿತ ನಡೆಸಿದ ಸರ್ಕಾರಗಳ ತನಿಖೆಗೆ ಆಗ್ರಹಿಸಿರುವ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಈಗಾಗಲೇ ಭ್ರಷ್ಟಾಚಾರ ತನಿಖೆ ಕುರಿತು ಲೋಕಾಯುಕ್ತದಲ್ಲಿ ದೂರು ಸಲ್ಲಿಕೆ ಆಗಿದೆ. ಅದರೊಟ್ಟಿಗೆ ಈ ಹಿಂದಿನ ಸರ್ಕಾರಗಳಲ್ಲಿ ನಡೆದ ಭ್ರಷ್ಟಾಚಾರ ಕುರಿತು ತನಿಖೆಯಾಗಲಿ‌.

ಅಲ್ಲದೇ ಸಿದ್ದರಾಮಯ್ಯ ತಮ್ಮಲ್ಲಿರುವ ದಾಖಲೆಗಳನ್ನು ಲೋಕಾಯುಕ್ತಕ್ಕೆ ಸಲ್ಲಿಕೆ ಮಾಡಿ ದೂರು ಸಲ್ಲಿಕೆ ಮಾಡಲಿ. ಅದನ್ನು ಬಿಟ್ಟು ಸುಖಾಸುಮ್ಮನೆ ಆರೋಪ ಮಾಡುವುದು ಸರಿಯಲ್ಲ ಎಂದು ಮಾಜಿ ಸಿಎಂ ವಿರುದ್ಧ ಹರಿಹಾಯ್ದರು.

ಹು - ಧಾ ಮಹಾನಗರ ಪಾಲಿಕೆಯ ಅನುದಾನದ ಬಗ್ಗೆ ಕೇಳಿದಕ್ಕೆ, ಪಾಲಿಕೆ ಮೇಯರ್ ಪತ್ರ ಬರೆದಿರುವ ಕುರಿತಂತೆ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದೇನೆ. ಆದಷ್ಟು ಬೇಗ ಅನುದಾನ ಸಿಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ : ಗಿಫ್ಟ್ ಕೇಸ್: ಪತ್ರಕರ್ತರ ಕ್ಷಮೆ ಕೋರುವಂತೆ ಕಾಂಗ್ರೆಸ್ ನಾಯಕರಿಗೆ ಅಶೋಕ್ ಆಗ್ರಹ

Last Updated : Oct 31, 2022, 2:29 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.