ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಇನ್ನು ಎರಡು-ಮೂರು ವರ್ಷದಲ್ಲಿ 24/7 ಗಂಟೆ ನಿರಂತರ ಕುಡಿಯುವ ನೀರು ಪೂರೈಕೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
ನಗರದ ಲಕ್ಷ್ಮೀ ಲೇಔಟ್ನ ಉದ್ಯಾನವನದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಅವರ ಅನುದಾನದಲ್ಲಿ ನಿರ್ಮಿಸುತ್ತಿರುವ ಬಯಲು ರಂಗಮಂದಿರದ ಕಟ್ಟಡ ಕಾಮಗಾರಿಯ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಈಗಾಗಲೇ ನಗರದ ಶೇ 30 ರಷ್ಟು ಪ್ರದೇಶದಲ್ಲಿ ನಿರಂತರ ಕುಡಿಯುವ ನೀರು ಪೂರೈಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲೇ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿತ್ತು. ಈಗ ಎಲ್ ಆ್ಯಂಡ್ ಟಿ ಏಜೆನ್ಸಿಯವರು ಈ ಟೆಂಡರ್ ಪಡೆದುಕೊಂಡಿದ್ದು, ನಗರದಲ್ಲಿ ಸಮೀಕ್ಷೆ ಕೂಡ ಆರಂಭಿಸಿದ್ದಾರೆ.
ಓದಿ: ಅರ್ಜುನ್ ಯುದ್ಧ ಟ್ಯಾಂಕ್ ಭಾರತೀಯ ಸೇನೆಗೆ ಹಸ್ತಾಂತರಿಸಿದ ಪ್ರಧಾನಿ ಮೋದಿ
ಇನ್ನು ಶೀಘ್ರವೇ ನಗರದಲ್ಲಿ ನೀರಿನ ಸಮಸ್ಯೆ ಪರಿಹಾರವಾಗಲಿದೆ ಎಂದು ತಿಳಿಸಿದರು.