ಹುಬ್ಬಳ್ಳಿ: ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹು-ಧಾ ಮಹಾನಗರ ಪಾಲಿಕೆ ಮಾಜಿ ಸದಸ್ಯ ಹಾಗೂ ಕಿಮ್ಸ್ ವೈದ್ಯ ವಿದ್ಯಾರ್ಥಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಜಯಪ್ರಕಾಶ್ ನಗರದ 67 ವರ್ಷದ ವ್ಯಕ್ತಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ. ನೆಗಡಿ, ಜ್ವರ, ಕೆಮ್ಮಿನಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಪತ್ತೆಯಾಗಿದೆ. ಇವರು ಸಾರ್ವಜನಿಕ ಕೆಲಸ ನಿಮಿತ್ತ ಹುಬ್ಬಳ್ಳಿಯ ವಿವಿಧೆಡೆ ಓಡಾಡಿದ್ದರು ಎಂದು ತಿಳಿದು ಬಂದಿದೆ.
ಕಿಮ್ಸ್ನ 26 ವರ್ಷದ ವೈದ್ಯಕೀಯ ವಿದ್ಯಾರ್ಥಿಗೆ ಸೋಂಕು ತಗುಲಿದ್ದು, ಇವರ ಸಂಪರ್ಕದಲ್ಲಿ ಇರುವವರನ್ನು ಕ್ವಾರಂಟೈನ್ ಮಾಡಲಾಗಿದೆ. ಇದರಿಂದ ಕಿಮ್ಸ್ನಲ್ಲಿ ಆತಂಕ ಶುರುವಾಗಿದೆ.