ಧಾರವಾಡ: ಕೋವಿಡ್-19 ನಿಯಂತ್ರಣಕ್ಕಾಗಿ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ನವಲಗುಂದ ತಾಲೂಕಿನ ಹಾಳಕುಸುಗಲ್ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಣ ಸಂಗ್ರಹ ಮಾಡಲಾಯಿತು.
ಗ್ರಾಮದ ಪ್ರತಿ ಓಣಿಯ ಮನೆ ಮನೆಗೆ ತೆರಳಿ ಜನರಲ್ಲಿ ಕೊರೊನಾ ವೈರಸ್ ಸೋಂಕಿನ ಬಗ್ಗೆ ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸುವುದರ ಜೊತೆಗೆ ನಿಧಿ ಸಂಗ್ರಹ ಮಾಡಿದರು. ಗ್ರಾಮದ ಜನರು ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಣ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಂ.ಎಂ.ದಾನಪ್ಪಗೌಡರ, ಅಧ್ಯಕ್ಷರು, ಸದಸ್ಯರು ಸೇರಿದಂತೆ ಗ್ರಾಮದ ಹಿರಿಯರು ಸೇರಿ ಗ್ರಾಮದಲ್ಲಿ ನಿಧಿ ಸಂಗ್ರಹ ಮಾಡಿದರು.