ETV Bharat / state

ಧಾರವಾಡದಲ್ಲಿ ಮತ್ತೆ 77 ಮಂದಿಗೆ ಕೊರೊನಾ: 959ಕ್ಕೆ ಏರಿದ ಸೋಂಕಿತರ ಸಂಖ್ಯೆ

author img

By

Published : Jul 11, 2020, 11:00 PM IST

ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಅಬ್ಬರಿಸಿದ್ದು, ಒಂದೇ ದಿನ 77 ಜನರಲ್ಲಿ ಸೋಂಕು ಪತ್ತೆಯಾಗಿದೆ.

sdds
ಧಾರವಾಡದಲ್ಲಿ ಮತ್ತೆ 77 ಮಂದಿಗೆ ಕೊರೊನಾ

ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸ್ಪೋಟಗೊಂಡಿದ್ದು, ಒಂದೇ ದಿನ 77 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 959ಕ್ಕೆ ಏರಿದೆ.

ಇಂದು ಸಹ ಮೂವರು ಸೋಂಕಿನಿಂದ ಮೃತಪಟ್ಟಿದ್ದು, ಸೋಂಕಿತರ ಸಂಪರ್ಕದಿಂದ 18 ಜನರಿಗೆ ಸೋಂಕು ಪತ್ತೆಯಾಗಿದೆ. 48 ಜನರಿಗೆ ಕೆಮ್ಮು, ನೆಗಡಿ ಜ್ವರದಿಂದ ಕೊರೊನಾ ದೃಢಪಟ್ಟಿದೆ. 4 ಜನರಿಗೆ ತೀವ್ರ ಉಸಿರಾಟದ ತೊಂದರೆಯಿಂದ ಕೋವಿಡ್​ ದೃಢವಾಗಿದೆ.

5 ಜನರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದ್ದು, ಇಬ್ಬರಿಗೆ ಅಂತರ್ ಜಿಲ್ಲಾ ಪ್ರವಾಸದ ಹಿನ್ನೆಲೆ ಸೋಂಕು ತಗುಲಿದೆ. ಇಂದು 12 ಜನರ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 318ಕ್ಕೆ ಏರಿಕೆಯಾಗಿದೆ. 609 ಸೋಂಕಿತರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.