ಧಾರವಾಡ: ಪೇಡಾ ನಗರಿಯಲ್ಲಿ ಇಂದು ಕೂಡ ಕೊರೊನಾ ಸ್ಫೋಟವಾಗಿದ್ದು, ಜಿಲ್ಲೆಯಲ್ಲಿ 89 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 757ಕ್ಕೆ ಏರಿಕೆಯಾಗಿದೆ.
ಸೋಂಕಿತರ ಸಂಪರ್ಕದಿಂದ 13 ಜನರಿಗೆ ಕೊರೊನಾ ತಗುಲಿದೆ. 53 ಜನರಿಗೆ ಕೆಮ್ಮು, ನೆಗಡಿ, ಜ್ವರದ ಲಕ್ಷಣಗಳಿಂದ ಸೋಂಕು ದೃಢಪಟ್ಟಿದೆ. 5 ಜನರಲ್ಲಿ ತೀವ್ರ ಉಸಿರಾಟದ ತೊಂದರೆಯಿಂದ ಸೋಂಕು ದೃಢಪಟ್ಟಿದೆ. 18 ಜನ ಸೋಂಕಿತರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.
ಇಂದು 6 ಜನ ಸೋಂಕಿತರು ಮೃತಪಟ್ಟಿದ್ದು, ಒಬ್ಬರಿಗೆ ಮರಣೋತ್ತರ ವರದಿ ಪಾಸಿಟಿವ್ ಬಂದಿದೆ. ಇದರಿಂದ ಸೋಂಕಿತರ ಸಾವಿನ ಸಂಖ್ಯೆ 20ಕ್ಕೇರಿಕೆಯಾಗಿದೆ. ಇಂದು 23 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 276 ಮಂದಿ ಗುಣಮುಖರಾಗಿದ್ದಾರೆ. 416 ಸೋಂಕಿತರಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.