ETV Bharat / state

ಕೊರೊನಾ ಎಫೆಕ್ಟ್.. ಶೇ.60ರಷ್ಟು ಸಣ್ಣ, ಮಧ್ಯಮ ಕೈಗಾರಿಕೆಗಳು ಲಾಕ್‌ಔಟ್ - small and medium industries lock out

ನುರಿತ ಕಾರ್ಮಿಕರು ತಮ್ಮ ಸ್ವಸ್ಥಾನಗಳಿಗೆ ತೆರಳಿದ್ದಾರೆ. ಪರಿಣಾಮ ಕೈಗಾರಿಕೆಗಳಲ್ಲಿ ಮಾನವ ಸಂಪನ್ಮೂಲದ ತೀವ್ರ ಸಮಸ್ಯೆ ಎದುರಾಗಿದೆ. ಸಣ್ಣ, ಮಧ್ಯಮ ಕೈಗಾರಿಕೆಗಳಲ್ಲಿ ಕಾರ್ಮಿಕರಿಗೆ ಪರ್ಯಾಯವಿಲ್ಲ. ಹೀಗಾಗಿ, ಕೊರೊನಾ ಎಫೆಕ್ಟ್​​ನಿಂದ ಶೇ.60ರಷ್ಟು ಸಣ್ಣ, ಮಧ್ಯಮ ಕೈಗಾರಿಕೆಗಳು ಲಾಕ್ಔಟ್ ಆಗಿವೆ..

ಸಣ್ಣ, ಮಧ್ಯಮ ಕೈಗಾರಿಕೆಗಳು ಲಾಕ್ ಔಟ್
ಸಣ್ಣ, ಮಧ್ಯಮ ಕೈಗಾರಿಕೆಗಳು ಲಾಕ್ ಔಟ್
author img

By

Published : Sep 30, 2020, 8:21 PM IST

Updated : Sep 30, 2020, 8:55 PM IST

ಹುಬ್ಬಳ್ಳಿ: ಕೊರೊನಾ ಸೋಂಕಿನ ಭಯ ಕೈಗಾರಿಕೋದ್ಯಮಿಗಳನ್ನು ಹೈರಾಣಾಗಿಸಿದೆ. ಲಾಕ್​​ಡೌನ್ ತೆರವಿನ ನಂತರವೂ ಸಣ್ಣ, ಮಧ್ಯಮ ಹಾಗೂ ದೊಡ್ಡ ಪ್ರಮಾಣದ ಕೈಗಾರಿಕೆಗಳು ಮೇಲಕ್ಕೆ ಎದ್ದೇಳಲು ಹರಸಾಹಸ ಪಡುತ್ತಿವೆ.

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸುಮಾರು 20 ಸಾವಿರ ಸಣ್ಣ, ಮಧ್ಯಮ ಹಾಗೂ ದೊಡ್ಡ ಕೈಗಾರಿಕೆಗಳಿವೆ. ಅವೆಲ್ಲವೂ ಈಗ ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಕಾರ್ಮಿಕರ ತೀವ್ರ ಕೊರತೆ ಎದುರಾಗಿದೆ. ಇದರಿಂದಾಗಿ ಕೈಗಾರಿಕಾ ಉತ್ಪಾದನೆ ಕುಂಠಿತಗೊಂಡಿದೆ. ಹೊರ ರಾಜ್ಯಗಳ ಕಾರ್ಮಿಕರು ವಲಸೆ ಹೋಗಿದ್ದಾರೆ.

ಶೇ.60ರಷ್ಟು ಸಣ್ಣ, ಮಧ್ಯಮ ಕೈಗಾರಿಕೆಗಳು ಲಾಕ್‌ಔಟ್

ನುರಿತ ಕಾರ್ಮಿಕರು ತಮ್ಮ ಸ್ವಸ್ಥಾನಗಳಿಗೆ ತೆರಳಿದ್ದಾರೆ. ಪರಿಣಾಮ ಕೈಗಾರಿಕೆಗಳಲ್ಲಿ ಮಾನವ ಸಂಪನ್ಮೂಲದ ತೀವ್ರ ಸಮಸ್ಯೆ ಎದುರಾಗಿದೆ. ಸಣ್ಣ, ಮಧ್ಯಮ ಕೈಗಾರಿಕೆಗಳಲ್ಲಿ ಕಾರ್ಮಿಕರಿಗೆ ಪರ್ಯಾಯವಿಲ್ಲ. ಹೀಗಾಗಿ, ಕೊರೊನಾ ಎಫೆಕ್ಟ್​​ನಿಂದ ಶೇ.60ರಷ್ಟು ಸಣ್ಣ, ಮಧ್ಯಮ ಕೈಗಾರಿಕೆಗಳು ಲಾಕ್ಔಟ್ ಆಗಿವೆ.

ಬೃಹತ್ ಕೈಗಾರಿಕೆಗಳಲ್ಲಿ ರೊಬೋಟಿಕ್,ಆಟೋಮೇಷನ್ ಮತ್ತಿತರ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಕೈಗಾರಿಕೆಗಳನ್ನು ಮುನ್ನಡೆಸಲಾಗುತ್ತಿದೆ. ಆದ್ರೂ ಕಚ್ಚಾ ವಸ್ತುಗಳ ಪೂರೈಕೆ ಹಾಗೂ‌ ರಫ್ತು ಸಂಪೂರ್ಣ ಸ್ಥಗಿತಗೊಂಡಿವೆ. ಕೈಗಾರಿಕೆಗಳನ್ನು ನಡೆಸದಂತ ಸ್ಥಿತಿ ಇದೆ. ದೊಡ್ಡ ಹಾಗೂ ಮಧ್ಯಮ ಕೈಗಾರಿಕೆಗಳು ಸಣ್ಣ ಕೈಗಾರಿಗಳನ್ನು ಅವಲಂಬಿಸಿವೆ. ಈಗ ಸಣ್ಣ ‌ಕೈಗಾರಿಗಳು ಬಾಗಿಲು ಹಾಕಿವೆ. ದೊಡ್ಡ ಕೈಗಾರಿಗಳ‌ ಸ್ಥಿತಿಯೂ ಡೋಲಾಯಮಾನವಾಗಿವೆ.

Last Updated : Sep 30, 2020, 8:55 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.