ETV Bharat / state

ಪಿ-2710 ಕೋವಿಡ್ ಪಾಸಿಟಿವ್ ವ್ಯಕ್ತಿಯ ಪ್ರಯಾಣ ವಿವರ - Dharawada latest news

ಹುಬ್ಬಳ್ಳಿ ನಗರದ ಬೆಂಗೇರಿ ನಿವಾಸಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಅವರ ಪ್ರಯಾಣಕ್ಕೆ ಸಂಬಂಧಿಸಿದ ವಿವರಣೆಯನ್ನು ಜಿಲ್ಲಾಡಳಿತ ಪ್ರಕಟಿಸಿದೆ.

Details of corona effected person
Details of corona effected person
author img

By

Published : May 31, 2020, 5:35 PM IST

ಧಾರವಾಡ: ಜಿಲ್ಲೆಯಲ್ಲಿ ಮೇ 28ರಂದು ಕೊರೊನಾ ದೃಢಪಟ್ಟಿರುವ P-2710ರ ಪ್ರಯಾಣ ವಿವರಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಜಿಲ್ಲಾಡಳಿತ ಪ್ರಕಟಿಸಿದೆ.

ಪಿ-2710 (65 ವರ್ಷ- ಪುರುಷ) ಇವರು ಹುಬ್ಬಳ್ಳಿ ನಗರದ ಬೆಂಗೇರಿ ನಿವಾಸಿಯಾಗಿದ್ದಾರೆ. ಫೆಬ್ರುವರಿ ತಿಂಗಳಿನಲ್ಲಿ ಪತ್ನಿ ಹಾಗೂ ಮಗನೊಂದಿಗೆ ಮುಂಬೈಗೆ ತೆರಳಿದ್ದರು. ಮೇ 25 ರಂದು ಅನಾರೋಗ್ಯದಿಂದಾಗಿ ಚಿಕಿತ್ಸೆಗಾಗಿ ಮುಂಬೈನ ರಾಜವಾಡಿ ಆಸ್ಪತ್ರೆಗೆ ದಾಖಲಾಗಿದ್ದರು.

ಮೇ 26ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿ ಮಧ್ಯಾಹ್ನ 1:30ಕ್ಕೆ ಖಾಸಗಿ ಆ್ಯಂಬುಲೆನ್ಸ್ ( ಎಂ.ಹೆಚ್. - 04 - ಎಫ್ ಕೆ - 1480) ಮೂಲಕ ಕುಟುಂಬದ 6 ಸದಸ್ಯರು ಹಾಗೂ ಇಬ್ಬರು ವಾಹನ ಚಾಲಕರೊಂದಿಗೆ ಮುಂಬೈಯಿಂದ ಹೊರಟು ನಿಪ್ಪಾಣಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ(ಥರ್ಮಲ್ ಸ್ಕ್ರೀನಿಂಗ್) ಮಾಡಿಸಿಕೊಂಡು ಮೇ 27 ರಂದು ಬೆಳಗ್ಗೆ 7:30ಕ್ಕೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಂದೇ ಇವರ ಗಂಟಲು ದ್ರವವನ್ನ ಪರೀಕ್ಷೆಗೊಳಪಡಿಸಲಾಗಿದೆ. ಬಳಿಕ ಇಬ್ಬರು ವಾಹನ ಚಾಲಕರು ವಾಪಸ್ ಮುಂಬೈಗೆ ಹಿಂದಿರುಗಿದ್ದಾರೆ.

ಮೇ 28 ರಂದು ಪಿ-2710 ಇವರಿಗೆ ಕೋವಿಡ್ -19 ಸೋಂಕು ತಗುಲಿದೆ ಎಂದು ದೃಢಪಟ್ಟಿದೆ. ಈ ಎಲ್ಲಾ ಅಂಶಗಳ ಹಿನ್ನೆಲೆ, ಈ ವ್ಯಕ್ತಿಯನ್ನು ಸಂಪರ್ಕಿಸಿದ ಸಾರ್ವಜನಿಕರಿಗೆ ಕೊರೊನಾ ಸೋಂಕು ತಗಲಿರಬಹುದಾದ ಸಾಧ್ಯತೆ ಇದೆ. ಹಾಗಾಗಿ ಆ ಎಲ್ಲಾ ವ್ಯಕ್ತಿಗಳು ಕೂಡಲೇ ಕೊರೊನಾ ಸಹಾಯವಾಣಿ 1077ಗೆ ಕರೆಮಾಡಿ ತಮ್ಮ ವಿವರಗಳನ್ನು ನೀಡಬೇಕು. ಹಾಗೂ ಕೂಡಲೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ಹಾಜರಾಗಿ ಪರೀಕ್ಷೆಗೆ ಒಳಪಡಬೇಕು ಎಂದು ಪ್ರಕಟಣೆಯಲ್ಲಿ ಜಿಲ್ಲಾಡಳಿತ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.