ಧಾರವಾಡ: ಮಹಿಳೆಯೊಬ್ಬರು ಹೆಲ್ತ್ ಬುಲೆಟಿಲ್ಗಿಂತ ಮೊದಲೆ ಫೇಸ್ಬುಕ್ನಲ್ಲಿ ಕೊರೊನಾ ಪ್ರಕರಣಗಳ ಕುರಿತು ಮಾಹಿತಿ ಪೋಸ್ಟ್ ಮಾಡಿರುವ ಘಟನೆ ನಡೆದಿದೆ.
ಎನ್ಜಿಒ ನಡೆಸುತ್ತಿರುವ ಮಹಿಳೆಯೊಬ್ಬರು ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ವೊಂದನ್ನು ಹಾಕಿದ್ದು, ಅದರಲ್ಲಿ ಧಾರವಾಡದಲ್ಲಿ 9 ಕೊರೊನಾ ಪ್ರಕರಣಗಳು ಪಾಸಿಟಿವ್ ಬಂದಿದ್ದು, ಅಹಮದಾಬಾದ್ನಿಂದ ಬಂದವರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೇ ಆ ವ್ಯಕ್ತಿಗಳ ಟ್ರಾವೆಲ್ ಹಿಸ್ಟರಿ ಕೂಡ ತಿಳಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಜನರಲ್ಲಿ ಆತಂಕ ಉಂಟು ಮಾಡಿದ್ದು, ಜಿಲ್ಲಾಡಳಿತಕ್ಕೂ ಮೊದಲೇ ಇವರಿಗೆ ಮಾಹಿತಿ ಯಾರು ಕೊಡುತ್ತಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.