ಧಾರವಾಡ: ಕೊರೊನಾ ವೈರಸ್ ಸೋಂಕು ಹರಡದಂತೆ ನಿಗಾ ವಹಿಸಲು ಜಿಲ್ಲಾದ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಲು ಜಿಲ್ಲಾಧಿಕಾರಿ ದೀಪಾ ಚೋಳನ್ ಸೂಚನೆ ನೀಡಿದ್ದಾರೆ.
ಜಿಲ್ಲೆಯಾದ್ಯಂತ ಎಲ್ಲಾ ಹೋಟೆಲ್, ರೆಸ್ಟೋರೆಂಟ್, ಮದ್ಯದಂಗಡಿ, ಬಾರ್ ಹಾಗು ಕ್ಲಬ್‌ಗಳನ್ನು ಮಾ. 21ರ ಬೆಳಗ್ಗೆ 10 ಗಂಟೆಯಿಂದ ಮಾ. 31ರ ಮಧ್ಯರಾತ್ರಿ 12 ಗಂಟೆವರೆಗೆ ಮುಚ್ಚುವಂತೆ ಆದೇಶಿಸಿದ್ದಾರೆ. ಇನ್ನು ಈ ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
ಜಿಲ್ಲೆಯಲ್ಲಿ ನಾಳೆ ಸಾರಿಗೆ ಸಂಸ್ಥೆ ಬಸ್ಗಳು ಸಹ ಸಂಚರಿಸಲ್ಲ. ಬಸ್ಗಳನ್ನು ಬಂದ್ ಮಾಡುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾಕರಸಾಸಂ) ಅಧಿಕಾರಿಗಳಿಗೆ ಆದೇಶ ಹೊರಡಿದ್ದಾರೆ. ಅಗತ್ಯವಿದ್ದಲ್ಲಿ ಮಾತ್ರ ಬಸ್ ಓಡಿಸುವಂತೆ ಸೂಚನೆ ನೀಡಲಾಗಿದೆ.