ಧಾರವಾಡ : ಜಿಲ್ಲೆಯಲ್ಲಿ ಇಂದು ಸಂಜೆ ಒಂದೇ ಕುಟುಂಬದ ನಾಲ್ಕು ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಪಿ-1942 (29 ವರ್ಷ ,ಮಹಿಳೆ) ಪಿ- 1943 ( 58 ವರ್ಷ ,ಪುರುಷ) ಪಿ-1944 ( 02 ವರ್ಷ, ಗಂಡು ಮಗು)
ಪಿ- 1945 ( 49 ವರ್ಷ, ಮಹಿಳೆ)
ಇವರೆಲ್ಲರೂ ಮಹಾರಾಷ್ಟ್ರ ರಾಜ್ಯದಿಂದ ಧಾರವಾಡಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಜಿಲ್ಲೆಗೆ ಬಂದ ಕೂಡಲೇ ಗಂಟಲು ದ್ರವ ಪರೀಕ್ಷೆಗೊಳಪಡಿಸಿ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು.
ಇವರೂ ಸೇರಿದಂತೆ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಈಗಾಗಲೇ 10 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.