ಧಾರವಾಡ: ಬಿಜೆಪಿಯ ನವಲಗುಂದ ಕ್ಷೇತ್ರದ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ ಅವರಿಗೆ ಕೊರೊನಾ ಸೋಂಕು ತಗುಲಿದೆ.
ಈ ಕುರಿತು ಫೇಸ್ ಬುಕ್ ನಲ್ಲಿ ಮಾಹಿತಿ ನೀಡಿರುವ ಶಾಸಕರು, ತಮಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಸದ್ಯ ನಾನು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖವಾಗಿ ಬರುತ್ತೇನೆ. ಇದರ ಜೊತೆಗೆ ನಿಮ್ಮೆಲ್ಲರ ಯೋಗಕ್ಷೇಮ ನನಗೆ ಅಷ್ಟೇ ಮುಖ್ಯವಾಗಿದೆ ಎಂದಿದ್ದಾರೆ.
ಶಾಸಕರು ನಿರಂತರವಾಗಿ ಜನರ ಸಂಪರ್ಕದಲ್ಲಿದ್ದು, ಕೋವಿಡ್ ವಾರಿಯರ್ ಆಗಿ ಕೆಲಸ ಮಾಡಿದ್ದಾರೆ.